HomeIndiaಟ್ರಕ್ –ಕಾರ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 8 ಮಂದಿ ಸಾವು

ಟ್ರಕ್ –ಕಾರ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 8 ಮಂದಿ ಸಾವು

ನಾಗಾಲ್ಯಾಂಡ್ ನ ತ್ಸೆಮಿನಿಯು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-2ರಲ್ಲಿ ವೇಗವಾಗಿ ಬಂದ ಟ್ರಕ್‌ ಗೆ ಅವರು ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಎಲ್ಲಾ 8ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. .

ರಾಜ್ಯ ರಾಜಧಾನಿ ಕೊಹಿಮಾದಿಂದ ಮೊಕೊಕ್‌ ಚುಂಗ್‌ಗೆ ತೆರಳುತ್ತಿದ್ದ ಟ್ರಕ್ ಗೆ ಕಾರ್ ಡಿಕ್ಕಿ ಹೊಡೆದಿದೆ. ಟ್ಸೆಮಿನಿಯು ಪೊಲೀಸರ ಪ್ರಕಾರ, ಲಿಮ್ ಟ್ರಾವೆಲ್ಸ್ ಅಡಿಯಲ್ಲಿ ನೋಂದಾಯಿಸಲಾದ ಎಸ್.ಯುವಿ.ಯಲ್ಲಿದ್ದ ಇಬ್ಬರು ಪುರುಷರು ಮತ್ತು ಆರು ಮಹಿಳೆಯರು ಅಪಘಾತದಿಂದ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆರಾಪಾನಿಯಿಂದ ಕೊಹಿಮಾಗೆ ಮರಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ವಾಹನ ನಜ್ಜುಗುಜ್ಜಾಗಿದೆ. ಹಲವಾರು ಅಡಿ ಕೆಳಗೆ ಬೀಳುವ ಮೊದಲು ಹೆದ್ದಾರಿಯಲ್ಲಿ ಸ್ವಲ್ಪ ದೂರಕ್ಕೆ ಎಳೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಕಾನೂನು ವಿಧಿವಿಧಾನಗಳನ್ನು ಅನುಸರಿಸಿ ಮೃತದೇಹಗಳನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು. ದುರಂತ ಘಟನೆಗೆ ಸಂಬಂಧಿಸಿದಂತೆ, ಪೊಲೀಸರು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಟ್ರಕ್ ಚಾಲಕ ಮತ್ತು ಟ್ರಕ್‌ನಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಸೇರಿದಂತೆ ಮೂವರನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ.

ಮುಖ್ಯಮಂತ್ರಿ ನೆಫಿಯು ರಿಯೊ ಅವರು ಪ್ರಯಾಣಿಕರ ಸಾವಿಗೆ ಸಂತಾಪ ಸೂಚಿಸಿದರು ಮತ್ತು ಸಂತ್ರಸ್ತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular