HomeIndiaದಾಖಲೆಯ ಐದನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ನೇಫಿಯು ರಿಯೊ

ದಾಖಲೆಯ ಐದನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ನೇಫಿಯು ರಿಯೊ

ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದಾಖಲೆಯ ಐದನೇ ಅವಧಿಗೆ ನೇಫಿಯು ರಿಯೊ ಮುಖ್ಯಮಂತ್ರಿಯಾಗಲಿದ್ದಾರೆ.

ನಾಗಾಲ್ಯಾಂಡ್ ರಾಜಕೀಯ ಧೀಮಂತ ನಾಯಕ ಮತ್ತು ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ನೇಫಿಯು ರಿಯೊ ಅವರು ತಮ್ಮ ಪಕ್ಷ ಮತ್ತು ಮಿತ್ರ ಪಕ್ಷವಾದ ಬಿಜೆಪಿ ಹೆಚ್ಚು ಸ್ಥಾನ ಗಳಿಸುವುದರೊಂದಿಗೆ ಸತತ ಐದನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಎರಡು ಪಕ್ಷಗಳು ಒಟ್ಟಾಗಿ 35 ಸ್ಥಾನಗಳನ್ನು ಪಡೆದುಕೊಂಡಿವೆ. ಈ ಗೆಲುವಿನೊಂದಿಗೆ ಈಶಾನ್ಯ ರಾಜ್ಯವನ್ನು ಮೂರು ಬಾರಿ ಮುನ್ನಡೆಸಿದ್ದ ಹಿರಿಯ ನಾಯಕ ಎಸ್‌ಸಿ ಜಮೀರ್ ಅವರ ದಾಖಲೆಯನ್ನು ನೇಫಿಯು ರಿಯೊ ಮುರಿದಿದ್ದಾರೆ. ಎನ್‌ಡಿಪಿಪಿ 23 ಸ್ಥಾನಗಳನ್ನು ಗೆದ್ದಿದೆ ಮತ್ತು ಬಿಜೆಪಿ 12 ಸ್ಥಾನಗಳನ್ನು ಗೆದ್ದಿದೆ, ಜಂಟಿಯಾಗಿ 35 ಸ್ಥಾನಗಳಲ್ಲಿ ಜಯಗಳಿಸಿವೆ.

ಹೆಖಾನಿ ಜಖಾಲು ಅವರು ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ಇತಿಹಾಸ ನಿರ್ಮಿಸಿದ್ದಾರೆ.

ನಾಗಾಲ್ಯಾಂಡ್ ಅಸೆಂಬ್ಲಿ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಅಠವಾಲೆ) ಎರಡು ಸ್ಥಾನಗಳನ್ನು ಗೆದ್ದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular