ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; ಚಾಲಕ ಸಾವು

ಇಂದು ನಾಗಾಲ್ಯಾಂಡ್ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿ ಇತರೆ 13 ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ಮಧ್ಯಾಹ್ನ ಲೋಕಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಾಡು ಪ್ರದೇಶದ ಗುಡ್ಡದಲ್ಲಿ ಬಸ್ ಪಲ್ಟಿಯಾಗಿದೆ. ಇದರ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಜಾರ್ಖಂಡ್ ಶಸ್ತ್ರಾಸ್ತ್ರ ಪಡೆಯ 8 ಮಂದಿ ಹಾಗೂ ನಾಗಾಲ್ಯಾಂಡ್ ಶಸ್ತ್ರಾಸ್ತ್ರ ಪಡೆಯ ಓರ್ವರು ಸೇರಿದಂತೆ ಒಟ್ಟು 13 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read