HomeKarnatakaBIG NEWS: ನಾಗಮಂಗಲ ಗಲಭೆ ಪ್ರಕರಣಕ್ಕೆ ಟ್ವಿಸ್ಟ್: ದೂರು ನೀಡಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

BIG NEWS: ನಾಗಮಂಗಲ ಗಲಭೆ ಪ್ರಕರಣಕ್ಕೆ ಟ್ವಿಸ್ಟ್: ದೂರು ನೀಡಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

ಮಂಡ್ಯ: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಪೊಲೀಸ್ ಅಧಿಕಾರಿಯನ್ನೇ ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ.

ನಾಗಮಂಗಲ ಗಲಭೆ ಬಳಿಕ ದೂರು ನೀಡಿದ್ದ ನಾಗಮಂಗಲ ಟೌನ್ ಠಾಣೆ ಪಿಎಸ್ಐ ಬಿ.ಜೆ. ರವಿ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆ ಮಾಡುತ್ತಿದ್ದವರ ಪ್ರಚೋದನೆಯಿಂದ ಗಲಭೆ ಸೃಷ್ಟಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪದಲ್ಲಿ ಪಿಎಸ್ಐ ರವಿ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಪೊಲೀಸ್ ಪೇದೆ ರಮೇಶ್ ಅವರನ್ನು ಕೂಡ ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular