HomeKarnatakaBIG NEWS: ನಾಗಮಂಗಲ ಗಲಭೆ ಪ್ರಕರಣ: NIA ತನಿಖೆಗೆ ಒಪ್ಪಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್...

BIG NEWS: ನಾಗಮಂಗಲ ಗಲಭೆ ಪ್ರಕರಣ: NIA ತನಿಖೆಗೆ ಒಪ್ಪಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ PFI, KFD ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ್ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ ಈ ನಿಟ್ಟಿನಲ್ಲಿ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಮಾತನಾಡಿದ ಆರ್.ಅಶೋಕ್, ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಸರ್ಕಾರ ದಾಖಲಿಸಿರುವ FIR ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಒತ್ತಾಯಿಸುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ PFI, KFD ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ. ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ FIR ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ.

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಆಗ್ರಹಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular