HomeKarnatakaBREAKING NEWS: ನಾಗಮಂಗಲ ಗಲಭೆ ಖಂಡಿಸಿ ಪ್ರತಿಭಟನೆ: ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

BREAKING NEWS: ನಾಗಮಂಗಲ ಗಲಭೆ ಖಂಡಿಸಿ ಪ್ರತಿಭಟನೆ: ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಹಿಂದೂ ಸಂಘಟನೆಯ ಗಣೇಶ ಉತ್ಸವ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನಾಗಮಂಗಲದಲ್ಲಿ ಗಲಭೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಪೊಲೀಸ್ ದೌರ್ಜನ್ಯಕ್ಕೂ ಧಿಕ್ಕಾರ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular