HomeKarnatakaBIG NEWS: ನಾಗಮಂಗಲ ಗಲಭೆ ಪ್ರಕರಣ: ಪರಿಸ್ಥಿತಿ ಹತೋಟಿಗೆ ಬಂದಿದೆ: ಎಸ್.ಪಿ ಮಾಹಿತಿ

BIG NEWS: ನಾಗಮಂಗಲ ಗಲಭೆ ಪ್ರಕರಣ: ಪರಿಸ್ಥಿತಿ ಹತೋಟಿಗೆ ಬಂದಿದೆ: ಎಸ್.ಪಿ ಮಾಹಿತಿ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಳದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ, ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಕೆಲ ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈಗಗಲೇ 46ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಮೆರವಣಿಗೆಗೆ ಅನುಮತಿ ನೀಡಿದ್ದೆವು. ಭದ್ರತೆಯನ್ನೂ ಒದಗಿಸಿದ್ದೆವು. ಮಸೀದಿ ಬಳಿ ಮೂರ್ತಿ ನಿಲ್ಲಿಸಿ ಸಮಯ ಕಳೆಯುತ್ತಿದ್ದರು. ಹೀಗಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಎರಡೂ ಕಡೆಯವರು ಕಲ್ಲುತೂರಾಟ ನಡೆಸಿದ್ದಾರೆ. ಗಲಭೆ ವಿಕೋಪಕ್ಕೆ ತಿರುಗಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular