ಸಚಿವೆ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ನಾಗಾರ್ಜುನ ಕೋರ್ಟ್ ಗೆ ಹಾಜರು

ಹೈದರಾಬಾದ್: ನಟ ನಾಗಾರ್ಜುನ ಅಕ್ಕಿನೇನಿ ಕುಟುಂಬ ಸಮೇತ ಹೈದರಾಬಾದ್‌ನ ನಾಂಪಲ್ಲಿ ವಿಶೇಷ ನ್ಯಾಯಾಲಯಕ್ಕೆ ಆಗಮಿಸಿದ್ದರು.

ತೆಲಂಗಾಣ ಸಚಿವೆ ಕೊಂಡಾ ಸುರೇಖಾ ಅವರು ತಮ್ಮ ಕುಟುಂಬವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರು 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತಮ್ಮ ಪುತ್ರ ನಾಗ ಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ನಡುವಿನ ವಿಚ್ಛೇದನಕ್ಕೆ ಸಂಬಂಧಿಸಿದಂತೆ ನಾಗಾರ್ಜುನ ಅಕ್ಕಿನೇನಿ ಅವರು ತೆಲಂಗಾಣ ಕಾಂಗ್ರೆಸ್ ಸಚಿವೆ ಕೊಂಡ ಸುರೇಖಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಹೈದರಾಬಾದ್‌ನ ಜಿಲ್ಲಾ ನ್ಯಾಯಾಲಯದಲ್ಲಿ ಸೆಕ್ಷನ್ 356 ಭಾರತೀಯ ನಯಯ್ ಸಂಹಿತಾ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ನಾಗಾರ್ಜುನ ಅಕ್ಕಿನೇನಿ ಸಲ್ಲಿಸಿರುವ ದೂರಿನಲ್ಲಿ ಕ್ರಿಮಿನಲ್ ಮಾನನಷ್ಟದ ಆರೋಪವಿದ್ದು, ಇದು ಗಂಭೀರ ಕಾನೂನು ಪರಿಣಾಮಗಳಿಗೆ ಕಾರಣವಾಗಬಹುದು. ನಾಗ ಚೈತನ್ಯ ಮತ್ತು ಸಮಂತಾ ರುತ್ ಪ್ರಭು ಅವರ ವಿಚ್ಛೇದನದ ಬಗ್ಗೆ ಕೊಂಡ ಸುರೇಖಾ ಅವರ ಹೇಳಿಕೆಗಳಿಂದ ಉಂಟಾದ ಹಾನಿಗೆ ಆರ್ಥಿಕ ಪರಿಹಾರವನ್ನು ಕೋರಿ ಸಿವಿಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಸಚಿವೆ ಹೇಳಿಕೆಗಳು ಕುಟುಂಬದ ಪ್ರತಿಷ್ಠೆಯ ಮೇಲೆ ಪರಿಣಾಮ ಬೀರಿವೆ ಎಂದು ದೂರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read