HomeKarnatakaಸಚಿವ ನಾಗೇಂದ್ರ ರಾಜೀನಾಮೆಗೆ ವಿಳಂಬ ಹಿನ್ನೆಲೆ: ಬಳ್ಳಾರಿ ಬಿಜೆಪಿಯಿಂದ ಸರ್ಕಾರದ ವಿರುದ್ಧ ಪೋಸ್ಟರ್ ವಾರ್

ಸಚಿವ ನಾಗೇಂದ್ರ ರಾಜೀನಾಮೆಗೆ ವಿಳಂಬ ಹಿನ್ನೆಲೆ: ಬಳ್ಳಾರಿ ಬಿಜೆಪಿಯಿಂದ ಸರ್ಕಾರದ ವಿರುದ್ಧ ಪೋಸ್ಟರ್ ವಾರ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ಪಡೆಯಲು ಸರ್ಕಾರ ತಡ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಬಿಜೆಪಿ ಘಟಕ ಪೋಸ್ಟರ್ ಅಭಿಯಾನ ಆರಂಭಿಸಿದೆ.

ಸರ್ಕಾರ ಹಾಗೂ ಸಚಿವರ ವಿರುದ್ಧ ಅಭಿಯಾನ ಆರಂಭಿಸಿದ್ದು, ಕೊಲೆಗಡುಕ ನಾಗೇಂದ್ರ ಎಂದು ಪೋಸ್ಟರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದೆ. ಸಚಿವ ನಾಗೇಂದ್ರ ರಾಜೀನಾಮೆಗೆ ಇನ್ನೆಂತಹ ಸಾಕ್ಷಿ ಬೇಕು? ಭ್ರಷ್ಟಾಚಾರಿಗೆ ರಕ್ಷೆ, ಲೂಟಿಕೋರರಿಗೆ ಶ್ರೀರಕ್ಷೆ, ದಕ್ಷ ಅಧಿಕಾರಿಗಳಿಗೆ ಸಾವಿನ ‘ಶಿಕ್ಷೆ’, ಇದು ‘ಕೈ’ ಸರ್ಕಾರದ ‘ನಕ್ಷೆ’ ಎಂದು ಕುಟುಕಿದೆ.

ಸಚಿವ ನಾಗೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular