HomeKarnatakaನಾಗೇಂದ್ರ ರಾಜೀನಾಮೆ ವಿಚಾರ: ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ನಾಗೇಂದ್ರ ರಾಜೀನಾಮೆ ವಿಚಾರ: ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ಮಾತ್ರವಲ್ಲ ಕಾಂಗ್ರೆಸ್ ನ ಕೆಲ ನಾಯಕರು ಕೂಡ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎಂಬ ಬಗ್ಗೆ ಚರ್ಚೆಗಳು ರಾಜ್ಯ ರಾಜಕೀಯ ವಲಯದಲ್ಲಿ ನಡೆಯುತ್ತಿವೆ.

ಈಗಾಗಲೇ ನಾಗೇಂದ್ರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನನ್ನ ವಿರುದ್ಧ ವಿಪಕ್ಷಗಳು ಅನಗತ್ಯ ಟಾರ್ಗೆಟ್ ಮಾಡುತ್ತಿವೆ. ನನ್ನಿಂದ ಪಕ್ಷಕ್ಕೆ ಮುಜುಗರವಾಗುವುದು ಬೇಡ. ಇದರಿಂದ ಮುಂದಿನ ಚುನಾವಣೆಗೂ ಪಕ್ಷ ಸಂಘಟನೆಗೆ ತೊಂದರೆಯಾಗುವುದು ಬೇಡ. ಹಾಗಾಗಿ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸುಮಾರು ೧೫ ನಿಮಿಷಗಲ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ನಿಮ್ಮ ವಿಚಾರವನ್ನು ಹೈಕಮಾಂಡ್ ನಾಯಕರಿಗೆ ತಿಳಿಸುತ್ತೇನೆ ಎಂದು ಸಿಎಂ, ನಾಗೇಂದ್ರ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ. ನಾಗೇಂದ್ರ ಭೇಟಿ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗೇಂದ್ರ ರಾಜೀನಾಮೆ ಇಂಗಿತದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು, ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು. ಈ ಬಗ್ಗೆ ನಾನು ಹೇಳುವುದಿಷ್ಟೇ ಎಂದಿದ್ದಾರೆ. ಈ ಮೂಲಕ ಪರೋಕ್ಷ ಸಂದೇಶ ರವಾನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular