HomeKarnatakaBREAKING: ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

BREAKING: ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮಹಿರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಾಗೇಂದ್ರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು, ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ರವಾನಿಸಿದ್ದಾರೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ವಿಪಕ್ಷ ಬಿಜೆಪಿ ನಾಯಕರು ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಸದನದ ಒಳಗೂ ಹೊರಗು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಘೋಷಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular