HomeKarnatakaನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಬೃಹತ್ ಪ್ರತಿಭಟನಾ ರ್ಯಾಲಿ: ನಾಳೆ ವಿಧಾನಸೌಧಕ್ಕೆ ಮುತ್ತಿಗೆ

ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಬೃಹತ್ ಪ್ರತಿಭಟನಾ ರ್ಯಾಲಿ: ನಾಳೆ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸದನದ ಒಳಗು ಹಾಗೂ ಹೊರಗೂ ಹೋರಾಟ ತೀವ್ರಗೊಳಿಸಿದ್ದಾರೆ. ನಾಳೆ ಮತ್ತೊಂದು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೂ ನಾವು ಹೋರಾಟ ನಿಲ್ಲಿಸಲ್ಲ. ಸಚಿವ ನಾಗೇಂದ್ರ ವಿರುದ್ಧ 35 ಕೇಸ್ ಗಳಿವೆ. ಅಂತವ ವ್ಯಕ್ತಿಯನ್ನು ಮತ್ತೆ ಸಚಿವನನ್ನಾಗಿ ಮಾಡುವ ಅಗತ್ಯವೇನಿತ್ತು? ವಾಲ್ಲೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಭಾಗಿಯಾಗಿದ್ದಾರೆ. ಕೋರ್ಟ್ ಇನ್ನೂ ಕ್ಲೀನ್ ಚಿಟ್ ನೀಡಿಲ್ಲ. ಆಗಲೇ ಮತ್ತೆ ಸಚಿವ ಸ್ಥಾನ ನೀಡಿದ್ದು ಸರಿಯಲ್ಲ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್ ನಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.

ನಾಗೇಂದ್ರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಮಾಡಿದ್ದು ಜಗಜ್ಜಾಹೀರಾಗಿದ್ದು, ಆ ಬಗ್ಗೆ ದಾಖಲೆ ನೀಡಿದ್ದೇವೆ. ನಾಳೆ ಬೆಳಗ್ಗೆ 9.30ಕ್ಕೆ ಫ್ರೀಡಂಪಾರ್ಕ್​ನಿಂದ ಪ್ರತಿಭಟನಾ ರ್ಯಾಲಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಪ್ರತಿಭಟನಾ ರ್ಯಾಲಿ ಬಗ್ಗೆ ನಿನ್ನೆ ಹೆಚ್.​ಡಿ.ಕುಮಾರಸ್ವಾಮಿ ಜೊತೆಗೂ ಚರ್ಚೆ ನಡೆಸಿದ್ದೇವೆ. ಅವರು ಕೂಡ ಪ್ರತಿಭಟನೆ ಮುಂದುವರಿಸಲು ಹೇಳಿದ್ದಾರೆ. ನಾಳೆ ನಾಗೇಂದ್ರ ರಾಜೀನಾಮೆ ಪಡೆಯುವ ವಿಶ್ವಾಸವಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ನಮ್ಮ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್​​ನವರು ಧರಣಿ ಮಾಡಿದ್ದಾರೆ. ಅಕ್ರಮದ ಬಗ್ಗೆ ಜನ ಧ್ವನಿ ಎತ್ತಿದ್ದಕ್ಕೆ ಕಾಂಗ್ರೆಸ್​​​ ಧರಣಿ ಮಾಡ್ತಿದೆ ಎಂದು ಆರ್. ಅಶೋಕ್​​ ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ದೇವರು ಒಳ್ಳೆಯ ಬುದ್ಧಿ ಕೊಟ್ಟು ಸೋಮವಾರ ನಾಗೇಂದ್ರ ರಾಜೀನಾಮೆ ಪಡೆಯುತ್ತಾರೆ. ಬಿಡದಿ ಟೌನ್ ಶಿಪ್ ನಿರ್ಮಾಣವನ್ನು ಕೈಬಿಟ್ಟು ರೈತರ ಹಿತ ಕಾಯಲು ಸರ್ಕಾರ ಮುಂದಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular