ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ನಾಗೇಂದ್ರ, ವಾಲ್ಮೀಕಿ ನಿಗಮದ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಒಂದೇ ಒಂದು ರೂಪಾಯಿಯನ್ನೂ ನಾನು ಅಕ್ರಮ ಮಾಡಿಲ್ಲ. ಆದರೆ ಮನುವಾದಿ ಮನಸ್ಥಿತಿಯಲ್ಲಿರುವ ವಿಪಕ್ಷಗಳು ಸುಳ್ಳನ್ನೇ ಪದೇ ಪದೇ ಹೇಳಿ ನಿಜಮಾಡಲು ಹೊರಟಿದ್ದಾರೆ. ನಾನು ತಪ್ಪು ಮಾಅಡಿಲ್ಲ ಎಂಬುದನ್ನು ಜಗಜ್ಜಾಹೀರು ಮಾಡುತ್ತೇನೆ ಎಂದು ಸವಾಲು ಹಾಕಿದರು.
ನನ್ನಿಂದ ಪಕ್ಷಕ್ಕೆ ಮುಜುಗರವಾಗಬಾರದು, ಸಿಎಂ ಡಿ.ಕೆ.ಶಿವಕುಮಾರ್ ಅವರ ಸರ್ಕಾರಕೆ ಹಿನ್ನಡೆಯಾಗಬಾರದು ಎಂಬ ಕಾರಣಕ್ಕೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.
ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಸಿದ್ಧ. ಆದರೆ ಕಾಂಗ್ರೆಸ್ ನಾಯಕರು ಒಂದು ಅವಕಾಶ ನೀಡಿ. ಚುನಾವಣಾ ಅಖಾಡಕ್ಕೆ ಬನ್ನಿ ಅಲ್ಲಿ ಶಕ್ತಿ ತೋರಿಸುತ್ತೇನೆ ಎಂದರು.

