HomeKarnatakaಸಂಪುಟ ಪುನರ್‌ ರಚನೆ ಊಹಾಪೋಹವಷ್ಟೇ: ದೆಹಲಿ ಭೇಟಿ ಮೇಲೆ ನಿರ್ಧಾರ

ಸಂಪುಟ ಪುನರ್‌ ರಚನೆ ಊಹಾಪೋಹವಷ್ಟೇ: ದೆಹಲಿ ಭೇಟಿ ಮೇಲೆ ನಿರ್ಧಾರ

ಬೆಂಗಳೂರು: ಸಂಪುಟ ಪುನರ್‌ ರಚನೆ ಊಹಾಪೋಹವಷ್ಟೇ: ಇಂದು ಅಥವಾ ನಾಳೆ ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತಾರೆ. ಹೈಕಮಾಂಡ್‌ ಭೇಟಿಯಾದರೆ ಅಲ್ಲಿ ನಾಗೇಂದ್ರ ಅವರ ರಾಜೀನಾಮೆ ಬಗ್ಗೆ ಚರ್ಚೆಗಳು ನಡೆಯಬಹುದು. ಸಂಪುಟ ಪುನರ್‌ ರಚನೆ ಊಹಾಪೋಹವಷ್ಟೇ. ಹೈಕಮಾಂಡ್‌ ತೀರ್ಮಾನದಂತೆ ಆಗುತ್ತದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಗೃಹಕಚೇರಿ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ನನ್ನ ಉತ್ತರ ನೀಡಿದ ಡಿಸಿಎಂ, ಯಾವ ಚಾರ್ಜ್‌ಶೀಟ್‌ನಲ್ಲೂ ನಾಗೇಂದ್ರ ಅವರ ಹೆಸರು ಇಲ್ಲ. ನಾನು ಗೃಹಸಚಿವನಾಗಿದ್ದವನು. ನನಗೆ ಮಾಹಿತಿ ಇದೆ. ಸಿಬಿಐ ತನಿಖೆ ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಆಗುತ್ತದೆ. ಈ ವಿಚಾರದಲ್ಲಿ ಬಿಜೆಪಿ ಪಾದಯಾತ್ರೆ ಮಾಡುತ್ತಿರುವುದು ರಾಜಕೀಯವಷ್ಟೇ. ಸದನದಲ್ಲೂ ಪ್ರಶ್ನೆಗಳನ್ನು ಕೇಳಿ ಉತ್ತರಿಸಲು ನಾವು ಸಮರ್ಥರಿದ್ದೇವೆ ಎಂದು ಹೇಳಿದ್ದೆವು. ಆದರೆ ಈಗ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡಲಾಗುವುದು. ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲೂಕುಗಳ ಗ್ರೌಂಡ್‌ ಟ್ರೂಥಿಂಗ್‌ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿಯವರು ಕೂಡ ತಂಡ ಮಾಡಿಕೊಂಡು ಹೋಗಿದ್ದರು. ಆದರೆ ಆ ಬಗ್ಗೆ ಸದನದಲ್ಲಿ ಚರ್ಚೆಯೂ ಮಾಡಿಲ್ಲ. ಮುಖ್ಯಮಂತ್ರಿಗಳಿಗಾಗಲಿ, ಕಂದಾಯ ಸಚಿವನಾದ ನನಗಾಗಲಿ ವರದಿ ಅಥವಾ ಪತ್ರವನ್ನೂ ನೀಡಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ರೈತರಿಗೆ ಬೆಳೆ ನಷ್ಟವಾಗಿದೆ. ವಿರೋಧ ಪಕ್ಷದವರು ಈ ಬಗ್ಗೆ ಚರ್ಚೆಗಳನ್ನು ಮಾಡಿ, ಸಲಹೆಗಳನ್ನು ಕೊಡಬೇಕು. ಆ ಕೆಲಸ ಮಾಡುವ ಬದಲು ಸದನದಲ್ಲಿ ಬರೀ ರಾಜಕೀಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರು ಹೇಳಿರುವುದು ನಿಜ: ನನ್ನನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಹೈಕಮಾಂಡ್‌ಗೆ ಸಿದ್ದರಾಮಯ್ಯನವರು ಒತ್ತಾಯಿಸಿರುವುದು ನಿಜ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ವೇಳೆ ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದ್ದರು. ಅದನ್ನು ಹೈಕಮಾಂಡ್‌ ಪರಿಗಣನೆಗೆ ತೆಗೆದುಕೊಂಡಿಲ್ಲ. ಉಪ ಮುಖ್ಯಮಂತ್ರಿಯಾಗಿ ನನ್ನನ್ನು ಮಾಡಬೇಕು ಎಂದೂ ಅವರು ಹೇಳಿದ್ದಾರೆ. ಹಾಗಾಗಿ ಸಿದ್ದರಾಮಯ್ಯನವರು ಹೇಳಿರುವುದು ಸತ್ಯ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದ ಸಮಯದಲ್ಲೂ ರಸ್ತೆ ಬದಿ ನಿಲ್ಲಿಸುವ ವಾಹನಗಳಿಗೆ ಶುಲ್ಕ ವಿಧಿಸುವ ಬಗ್ಗೆ ಚರ್ಚೆ ಮಾಡಿದ್ದೆವು. ರಸ್ತೆಗಳು ಇರುವುದು ಜನ ಓಡಾಡುವುದಕ್ಕೆ. ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದರೆ ರಸ್ತೆಗಳು ಕಾಣುವುದೇ ಇಲ್ಲ. ಹಾಗಾಗಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ತೀರ್ಮಾನ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಒಳಮೀಸಲಾತಿ ಜಾರಿಯಾಗಿದೆ: ಅಸಮಾನತೆ ತೊಲಗಬೇಕಾದರೆ ಮೀಸಲಾತಿ ಮತ್ತು ಒಳಮೀಸಲಾತಿ ಇರಲೇಬೇಕು ಎಂದು ನಿನ್ನೆಯ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಒಳಮೀಸಲಾತಿ ಬಗ್ಗೆಯೂ ಮಾತನಾಡಿದ್ದಾರೆ. ಒಳಮೀಸಲಾತಿ ಈಗ ಮುಗಿದ ಕಥೆ. ಬಹಳ ವರ್ಷಗಳಿಂದ ನಡೆಯುತ್ತಿದ್ದ ಹೋರಾಟದ ಹಿನ್ನೆಲೆಯಲ್ಲಿ ಒಳಮೀಸಲಾತಿಯನ್ನು ನಮ್ಮ ಸರ್ಕಾರ ಜಾರಿಗೊಳಿಸಿದೆ. ಒಟ್ಟು ಮೀಸಲಾತಿಯ ಪ್ರಮಾಣ ಶೇಕಡಾ ಐವತ್ತನ್ನು ಮೀರಬಾರದು ಎಂದು ಸುಪ್ರೀಂಕೋರ್ಟ್ ಆದೇಶ ಇರುವ ಕಾರಣ ಒಳಮೀಸಲಾತಿಯ ಜಾರಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಈ ಇತಿಮಿತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular