ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದ ಕಲ್ಮೇಶ್ವರ ತಹಸಿಲ್ನ ಬಜಾರ್ ಗ್ರಾಮದ ಬಳಿಯ ಚಂದೂರ್ ಗ್ರಾಮದ ಬಳಿ ಇರುವ ಸೋಲಾರ್ ಪ್ಲಾಂಟ್(ಸೌರ ಸ್ಥಾವರ)ನಲ್ಲಿ ದೊಡ್ಡ ಸ್ಫೋಟ ಸಂಭವಿಸಿದೆ.
ತಡರಾತ್ರಿ 1 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಕಾರ್ಮಿಕರು ಮತ್ತು ನಿವಾಸಿಗಳಲ್ಲಿ ಭೀತಿ ಮೂಡಿಸಿದೆ.
ಆರಂಭಿಕ ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ, ಕಂಪನಿಯಲ್ಲಿ 900 ರಿಂದ 6,000 ಕಾರ್ಮಿಕರನ್ನು ಶಿಫ್ಟ್ಗಳಲ್ಲಿ ನಿಯೋಜಿಸಲಾಗಿತ್ತು. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ದೃಢಪಟ್ಟಿಲ್ಲವಾದರೂ, ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ ಮತ್ತು ಎಂಟರಿಂದ ಒಂಬತ್ತು ಇತರರಿಗೆ ವಿವಿಧ ಹಂತದ ಗಾಯಗಳಾಗಿವೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಎನ್ಸಿಪಿ (ಎಸ್ಪಿ) ನಾಯಕ ಮತ್ತು ಮಾಜಿ ರಾಜ್ಯ ಗೃಹ ಸಚಿವ ಅನಿಲ್ ದೇಶಮುಖ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದರು. ಸುಮಾರು ಎಂಟರಿಂದ ಒಂಬತ್ತು ಮಂದಿ ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮಾಹಿತಿ ಪಡೆದ ಕೂಡಲೇ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಸ್ಫೋಟದ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.