HomeKarnatakaಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು–ರಾಮೇಶ್ವರಂ ನಡುವೆ ವಿಶೇಷ ರೈಲು

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೈಸೂರು–ರಾಮೇಶ್ವರಂ ನಡುವೆ ವಿಶೇಷ ರೈಲು

ಮೈಸೂರು: ದಸರಾ, ದೀಪಾವಳಿ ಹಾಗೂ ಛತ್ ಹಬ್ಬಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ನೈಋತ್ಯ ರೈಲ್ವೆ ಮೈಸೂರು–ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಎರಡೂ ಮಾರ್ಗಗಳಲ್ಲಿ ತಲಾ 9 ಟ್ರಿಪ್‌ಗಳು ಸಂಚರಿಸಲಿವೆ.

ರೈಲು ಸಂಖ್ಯೆ 06263 ಮೈಸೂರು–ರಾಮೇಶ್ವರಂ ವಿಶೇಷ ರೈಲು ಅಕ್ಟೋಬರ್ 5ರಿಂದ ನವೆಂಬರ್ 30ರವರೆಗೆ ಪ್ರತಿ ಸೋಮವಾರ ಸಂಜೆ 6.35ಕ್ಕೆ ಮೈಸೂರಿನಿಂದ ಹೊರಡಲಿದೆ. ಮರುದಿನ ಮಂಗಳವಾರ ಬೆಳಗ್ಗೆ 11 ಗಂಟೆಗೆ ರಾಮೇಶ್ವರಂ ತಲುಪಲಿದೆ.

ಹಿಂತಿರುಗುವ ಮಾರ್ಗದಲ್ಲಿ 06264 ರಾಮೇಶ್ವರಂ–ಮೈಸೂರು ವಿಶೇಷ ರೈಲು ಅಕ್ಟೋಬರ್ 6ರಿಂದ ಡಿಸೆಂಬರ್ 1ರವರೆಗೆ ಪ್ರತಿ ಮಂಗಳವಾರ ಮಧ್ಯಾಹ್ನ 3.30ಕ್ಕೆ ರಾಮೇಶ್ವರಂನಿಂದ ಹೊರಡಲಿದ್ದು, ಬುಧವಾರ ಬೆಳಗ್ಗೆ 7.45ಕ್ಕೆ ಮೈಸೂರು ತಲುಪಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಮುಖ ನಿಲ್ದಾಣಗಳು

ಮಂಡ್ಯ, ರಾಮನಗರ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಹೊಸೂರು, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗಲ್, ಮಧುರೈ, ಮಾನಾಮಧುರೈ, ಪರಮಕ್ಕುಡಿ ಹಾಗೂ ರಾಮನಾಥಪುರಂನಲ್ಲಿ ರೈಲು ನಿಲುಗಡೆ ಹೊಂದಲಿದೆ.

21 ಬೋಗಿಗಳ ರೈಲು

ವಿಶೇಷ ರೈಲಿನಲ್ಲಿ ಒಟ್ಟು 21 ಬೋಗಿಗಳಿದ್ದು, 2 ಎಸಿ 2-ಟೈರ್, 5 ಎಸಿ 3-ಟೈರ್, 8 ಸ್ಲೀಪರ್, 4 ಸಾಮಾನ್ಯ ದ್ವಿತೀಯ ದರ್ಜೆ ಸೇರಿದಂತೆ ಇತರೆ ಬೋಗಿಗಳು ಇರಲಿವೆ.

ದಸರಾ ಹಾಗೂ ದೀಪಾವಳಿ ಸಂದರ್ಭದಲ್ಲಿ ರಾಮೇಶ್ವರಂ ಸೇರಿದಂತೆ ತಮಿಳುನಾಡಿನ ವಿವಿಧ ಭಾಗಗಳಿಗೆ ತೆರಳುವ ಮೈಸೂರು, ಮಂಡ್ಯ, ರಾಮನಗರ ಮತ್ತು ಬೆಂಗಳೂರು ಭಾಗದ ಪ್ರಯಾಣಿಕರಿಗೆ ಈ ವಿಶೇಷ ರೈಲು ಹೆಚ್ಚಿನ ಅನುಕೂಲ ಕಲ್ಪಿಸಲಿದೆ.

ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಫೆಲೋಶಿಪ್

ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಲ್ಲಿ 2026-27ನೇ ಸಾಲಿನಲ್ಲಿ ಪೂರ್ಣ ಕಾಲಿಕವಾಗಿ ಪಿಎಚ್‍ಡಿ ಸಂಶೋಧನೆ ಕೈಗೊಳ್ಳುತ್ತಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ (ಜೆಆರ್‍ಎಫ್ ಮಾದರಿ) ಫೆಲೋಶಿಪ್ ಪಾವತಿಸುವ ಸಂಬಂಧ ಪಿಹೆಚ್.ಡಿ ಫೆಲೋಶಿಪ್ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ಸಂಶೋಧನಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವರ್ಗಕ್ಕೆ ಸೇರಿದವರಾಗಿರಬೇಕು. ಸರ್ಕಾರಿ/ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಫೆಲೋಶಿಪ್‍ಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ವಿದ್ಯಾರ್ಥಿಯ/ಪಾಲಕರ/ಪೋಷಕರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಲ್ಲಿ ರೂ.8 ಲಕ್ಷಗಳನ್ನು ಮೀರಬಾರದು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ವರ್ಷ ಮೀರಬಾರದು.

ವಿದ್ಯಾರ್ಥಿಯು ಸರ್ಕಾರದಿಂದ ಶಾಸನಬದ್ದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ. ಕೋರ್ಸಿಗೆ ಪ್ರವೇಶ ಪಡೆದಿರಬೇಕು. ಕೋರ್ಸ್-ಪೂರ್ಣಕಾಲಿಕ. ಈ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗಿರುವ ಬಗ್ಗೆ ಹಾಗೂ ಎನ್‍ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಈ ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.

ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ.8548068519, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ 9972799091, ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ.9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಸಿ.ಎಸ್. ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular