HomeKarnatakaಶಾರ್ಜಾದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ನಕಲಿ ಔಷಧ ಪ್ರಕರಣದ ಕಿಂಗ್ ಪಿನ್ ಪ್ರಶಾಂತ್ ಅರೆಸ್ಟ್

ಶಾರ್ಜಾದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ನಕಲಿ ಔಷಧ ಪ್ರಕರಣದ ಕಿಂಗ್ ಪಿನ್ ಪ್ರಶಾಂತ್ ಅರೆಸ್ಟ್

ಬೆಂಗಳೂರು: ದೊಡ್ಡೇರಿ ಫಾರ್ಮ್ ಹೌಸ್ ನಲ್ಲಿ ನಕಲಿ ಔಷಧ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಿಂಗ್ ಪಿನ್ ಪ್ರಶಾಂತ್ ರಂಜನ್ ಬಾಬು ಬಂಧಿಸಲಾಗಿದೆ.

ಶಾರ್ಜಾದಿಂದ ವಾಪಸ್ ಆದ ವೇಳೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಪ್ರಶಾಂತ್ ಬಂಧಿಸಲಾಗಿದೆ. ಲುಕ್ ಔಟ್ ನೋಟಿಸ್ ಹೊರಡಿಸಿದ್ದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಅಧಿಕಾರಿಗಳು ಪ್ರಶಾಂತ್ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಎಸಿಪಿ ಅಂಜನ್ ಕುಮಾರ್ ತಂಡದ ವಶಕ್ಕೆ ನೀಡಿದ್ದಾರೆ.

ದೊಡ್ಡೇರಿ ಫಾರ್ಮ್ ಹೌಸ್ ನಲ್ಲಿ ನಕಲಿ ಔಷಧ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಶಾಂತ್ ರಂಜನ್ ಬಾಬು ಬಂಧಿಸಲಾಗಿದೆ. ಮುಂಜಾನೆ 5:40ಕ್ಕೆ ಪ್ರಶಾಂತ್ ಬಂಧಿಸಿದ ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಡರಾತ್ರಿ ಡ್ರ್ಯಾಗರ್ ನಿಂದ ಇರಿದು ರೌಡಿಶೀಟರ್ ಕೊಲೆ: ಎಸಿಪಿ ಕಚೇರಿ ಕೂಗಳತೆ ದೂರದಲ್ಲೇ ಘಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಪೀಣ್ಯ ಎಸಿಪಿ ಕಚೇರಿಯ ಕೂಗಳತೆ ದೂರದಲ್ಲಿಯೇ ತಡರಾತ್ರಿ ಘಟನೆ ನಡೆದಿದೆ.

ದೀಪಕ್ ಅಲಿಯಾಸ್ ದೀಪು(31) ಕೊಲೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ದೀಪಕ್ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಬನ್ನೇರುಘಟ್ಟದ ದೀಪಕ್ ನಿನ್ನೆ ದಾಸರಹಳ್ಳಿಯಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಇದ್ದ ಕಾರಣ ಅಲ್ಲಿಗೆ ತೆರಳಿದ್ದ.

ಸ್ನೇಹಿತರ ಜೊತೆಗೆ ತೆರಳಿದ್ದ ದೀಪಕ್ ವಾಪಸ್ ಆಗುತ್ತಿದ್ದ. ವಾಪಸ್ ಆಗುವಾಗ ದೀಪು ಯುವಕನೊಬ್ಬನ ಕಾಲು ತುಳಿದಿದ್ದಾನೆ. ಇದೇ ವಿಚಾರಕ್ಕೆ ಜಗಳ ಶುರುವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಗಲಾಟೆಯ ವೇಳೆ ದುಷ್ಕರ್ಮಿಗಳು ಡ್ರ್ಯಾಗರ್ ನಿಂದ ದೀಪುಗೆ ಇರಿದು ಪರಾರಿಯಾಗಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ದೀಪಕ್ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಡಿಸಿಪಿ ಗೋಪಾಲ್ ಮತ್ತು ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೀಕ್ಷಾಭೂಮಿ ಯಾತ್ರೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು:  ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ಡಾ. ಬಿ.ಆರ್. ಅಂಬೇಡ್ಕರ್ ರವರ ದೀಕ್ಷಾಭೂಮಿಯಲ್ಲಿ ನಡೆಯುವ ಪ್ರವರ್ತನಾ ದಿನ (ವಿಜಯದಶಮಿ ದಿನ) ಈ ಕಾರ್ಯಕ್ರಮಕ್ಕೆ ಅವರ ಅನುಯಾಯಿ ಯಾತ್ರಾರ್ಥಿಗಳಿಗೆ ಭೇಟಿ ನೀಡಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ

ಆಸಕ್ತಿಯುಳ್ಳ ಅನುಯಾಯಿ ಯಾತ್ರಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೆ.ಎಸ್.ಆರ್.ಟಿ.ಸಿ ಮತ್ತು ಇತರೆ ಸಾರಿಗೆ ಬಸ್ಸು ಮತ್ತು ರೈಲಿನ ಮೂಲಕ ಪ್ರಯಾಣಿಸಲು ಆನ್ ಲೈನ್ ಮೂಲಕ ವೆಬ್ ಸೈಟ್: https://swd.karnataka.gov.in/ ರಲ್ಲಿ ಅಕ್ಟೋಬರ್ 09 2026ರ ರವರೆಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ , 33ನೇ ಕ್ರಾಸ್ ,ಜಯನಗರ 7 ನೇ ಬ್ಲಾಕ್ ,ಸಿಟಿ ಕಾಲೇಜು ಹತ್ತಿರ ,ಜಯನಗರ, ದೂರವಾಣಿ ಸಂಖ್ಯೆ್ 080-26711096 ಅಥವಾ ಇಮೇಲ್ – tswobloresouth@gmail. com ಅನ್ನು  ಸಂಪರ್ಕಿಸಬಹುದು ಎಂದು  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular