HomeKarnatakaರಾಜ್ಯದಲ್ಲಿ ನಕಲಿ ಔಷಧಿ ಜಾಲ ಪತ್ತೆ ಪ್ರಕರಣ: ತನಿಖೆಗೆ ಶೀಘ್ರದಲ್ಲಿ SIT ರಚನೆ: ಭಾಗಿಯಾದವರ ವಿರುದ್ಧವೂ...

ರಾಜ್ಯದಲ್ಲಿ ನಕಲಿ ಔಷಧಿ ಜಾಲ ಪತ್ತೆ ಪ್ರಕರಣ: ತನಿಖೆಗೆ ಶೀಘ್ರದಲ್ಲಿ SIT ರಚನೆ: ಭಾಗಿಯಾದವರ ವಿರುದ್ಧವೂ ಕೇಸ್ ದಾಖಲು: ಆರೋಗ್ಯ ಸಚಿವ ಯು.ಟಿ.ಖಾದರ್ ಮಾಹಿತಿ

ಬೆಂಗಳೂರು: ನಕಲಿ ಔಷಧಿ ಜಾಲ ಪತ್ತೆ ಪ್ರಕರಣದ ತನಿಖೆಗೆ ಶೀಘ್ರದಲ್ಲಿಯೇ ಎಸ್ಐಟಿ (Special Investigation Team) ರಚನೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯು.ಟಿ.ಖಾದರ್, ನಕಲಿ ಔಷಧಿ ಜಾಲ ಪತ್ತೆ ಬಹಳ ಗಂಭೀರ ವಿಷಯ. ಅಂತಾರಾಜ್ಯ ಮಟ್ಟದಲ್ಲಿ ಜಾಲ ಇದೆ. ನಮ್ಮ ರಾಜ್ಯದಲ್ಲಿ ಬೇರೆ ಎಲ್ಲೆಲ್ಲಿ ಈ ಜಾಲ ವ್ಯಾಅಪಿಸಿದೆ ಎಂಬುದನ್ನು ಕಂಡುಹಿಡಿಯಬೇಕು ಎಂದು ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದೇನೆ. ಅದೇ ರೀತಿ ಸಂಬಂಧಪಟ್ಟ ರಾಜ್ಯದ ಸಚಿವರಿಗೂ ಪತ್ರ ಬರೆದಿದ್ದೇನೆ. ಆ ಫ್ಯಾಕ್ಟರಿ ಮೇಲೆ ಅವರೇ ಕ್ರಮ ಜರುಗಿಸಬೇಕು. ಎಸ್ಐಟಿ ಮುಖಾಂತರ ತನಿಖೆ ನಡೆಸಬೇಕು. ಈಗಾಗಲೇ ರಾಮನಗರ ಎಸ್ಪಿ ಮತ್ತು ಪೊಲೀಸರು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದಿನ ಎಲ್ಲಾ ಆರೋಗ್ಯ ಸಚಿವರು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದಾರೆ. ಅದನ್ನು ನಾನು ಮುಂದುವರೆಸಿಕೊಂಡು ಹೋಗುತ್ತಿದ್ದೇನೆ. ಇದು ಕೇವಲ ಆರೋಗ್ಯ ಇಲಾಖೆ ಅಥವಾ ಆಹಾರ ಇಲಾಖೆಯಿಂದ ಸಾಧ್ಯವಿಲ್ಲ. ನಮ್ಮಲ್ಲಿ 6.5 ಕೋಟಿ ಜನಸಂಖ್ಯೆ ಇದೆ ಎಂದು ತಿಳಿಸಿದರು.

ಇಲಾಖೆಯಲ್ಲಿರುವ 150 ಜನರಿಂದ ಇದನ್ನು ನೋಡಲು ಕಷ್ಟವಾಗುತ್ತದೆ. ಸಮಾಜದಲ್ಲಿ ಎಲ್ಲರೂ ಸಹಕರಿಸಬೇಕು. ಒಂದೇ ಔಷಧಿ ಎರಡು ಅಂಗಡಿಗಳಲ್ಲಿ ಬೇರೆ ಬೇರೆ ದರದಲ್ಲಿ ಮಾರಾಟ ಆಗುತ್ತಿದ್ದರೆ ನಮಗೆ ಮಾಹಿತಿ ಕೊಡಬೇಕು ಎಂದು ಮನವಿ ಮಾಡಿದರು.

ಎಷ್ಟು ವರ್ಷಗಳಿಂದ ಈ ನಕಲಿ ಔಷಧಿಗಳು ಮಾರುಕಟ್ಟೆಯಲ್ಲಿವೆ ಎಂಬ ಎಲ್ಲಾ ವಿಚಾರಗಳು ತನಿಖೆ ಆದಮೇಲೆ ಹೊರ ಬರುತ್ತವೆ. ಯಾವ್ಯಾವ ಆಸ್ಪತ್ರೆಗಳಿಗೆ ನಕಲಿ ಔಷಧಿ ತಲುಪಿದೆ? ಯಾವ ರೋಗಿಗಳಿಗೆ ಇದನ್ನು ನೀಡಿದ್ದಾರೆ? ಎಲ್ಲವೂ ತನಿಖೆಯ ನಂತರ ಗೊತ್ತಾಗುತ್ತದೆ ಎಂದರು.

ಸದ್ಯಕ್ಕೆ 6 ಕಂಪನಿಗಳನ್ನು ಲೇಬಲ್ ಮಾಡಲಾಗಿದೆ. ಯಾರು ತಂದು ಮಾರಾಟ ಮಾಡುತ್ತಿದ್ದಾರೋ ಅವರ ಮೇಲೆ ಕೇಸ್ ದಾಖಲಾಗಿದೆ. ಇದರಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಲ್ಲರ ಮೇಲೂ ಕೇಸ್ ದಾಖಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ನಕಲಿ ಔಷಧಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳ ಲೇಬಲ್​ ಬಳಸಿ ಮರುಪ್ಯಾಕ್​ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಡದಿಯ ಸಿ.ಕೆ.ತಾಂಡ್ಯ ಸಮೀಪದ ಫಾರ್ಮ್‌ಹೌಸ್‌​ ಮೇಲೆ ದಾಳಿ ನಡೆಸಿದ್ದ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು, ₹4.91 ಕೋಟಿ ಮೌಲ್ಯದ ಔಷಧಿಗಳು, ಬಾಟಲಿಗಳು, ಲೇಬಲ್‌ಗಳು, ಪ್ಯಾಕೇಜಿಂಗ್ ಸಾಮಗ್ರಿ ಮತ್ತು ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇಲ್ಲಿ ಬಹುರಾಷ್ಟ್ರೀಯ ಕಂಪನಿಯ ನಕಲಿ ಔಷಧಿಗಳ ಮಾರಾಟ ಮಾಡಲಾಗುತ್ತಿತ್ತು. ಕಡಿಮೆ ಬೆಲೆಯುಳ್ಳ ಔಷಧಿಗಳನ್ನು ತಂದು ಹೆಚ್ಚು ಬೆಲೆಯ ಔಷಧಿಗಳ ಲೇಬಲ್ ಅಂಟಿಸಿ, ಮರುಪ್ಯಾಕಿಂಗ್ ಮಾಡಿ ವಿವಿಧ ಆಸ್ಪತ್ರೆಗಳಿಗೆ ಮಾರಾಟ ಮಾಡಲಾಗುತ್ತಿತ್ತು. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular