ಬೆಂಗಳೂರು: ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ಯುವತಿ ಮೃತದೇಹ ಪತ್ತೆಯಾಗಿದೆ.
ಜಾರ್ಖಂಡ್ ಮೂಲದ ಪೂಜಾ ದತ್ತ(34) ಮೃತಪಟ್ಟವರು. ಆಡುಗೋಡಿಯಲ್ಲಿ ವಾಸವಾಗಿದ್ದ ಪೂಜಾ ದತ್ತ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮನೆಯಿಂದ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ಸಂಪೂರ್ಣ ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸಾವು ಸಂಭವಿಸಿ ಕನಿಷ್ಠ 2ರಿಂದ 3 ದಿನಗಳು ಕಳೆದಿರಬಹುದು ಎಂದು ಶಂಕಿಸಲಾಗಿದ್ದು, ಆಡುಗೋಡಿ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

