BREAKING NEWS : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ : ನಳಿನ್ ಕುಮಾರ್ ಕಟೀಲ್ ಯೂ ಟರ್ನ್

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ನಳೀನ್ ಕುಮಾರ್ ಕಟೀಲ್ ಯೂ ಟರ್ನ್ ಹೊಡೆದಿದ್ದಾರೆ.

ಸುದ್ದಿಗಾರರ ಜೊತೆ ಮಾತಾಡಿದ ಕಟೀಲ್ ‘ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು, ಈ ಬಗ್ಗೆ  ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಚುನಾವಣೆ ಸೋಲಿನ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ, ಮೌಖಿಕವಾಗಿ ಹಾಗೂ ಪತ್ರದ ಮೂಲಕ ರಾಜೀನಾಮೆ ಸಲ್ಲಿಸಿದ್ದೆ ಎಂದು ಹೇಳಿದ್ದರು. ಆದರೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ನಳೀನ್ ಕುಮಾರ್ ಕಟೀಲ್ ಯೂ ಟರ್ನ್ ಹೊಡೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಬಳ್ಳಾರಿಯಲ್ಲಿ ಕಟೀಲ್ ಹೇಳಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಹಲವು ನಾಯಕರು; ಯಾರಿಗೆ ಒಲಿಯಲಿದೆ ಪಟ್ಟ ?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಮಲ ಪಾಳಯದ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಹೊಸ ಅಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿದೆ.

ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ, ಹೈಕಮಾಂಡ್ ಗೆ ಪತ್ರ ಬರೆದು ತನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.

ಇದರ ಬೆನ್ನಲ್ಲೇ ಮಾಜಿ ಸಚಿವ ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ, ಸುನೀಲ್ ಕುಮಾರ್, ಸಿ.ಟಿ. ರವಿ, ಶೋಭಾ ಕರಂದ್ಲಾಜೆ ಕೂಡ ರೇಸ್ ನಲ್ಲಿದ್ದು, ಇನ್ನೊಂದೆಡೆ ಬಿ.ವೈ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕ ತೀವ್ರ ಕುತೂಹಲ ಮೂಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read