HomeKarnatakaBIG NEWS: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆ ಅಂಗಡಿ ತೆರೆದು ಕುಳಿತಿದೆ : ಎಲ್ಲಾ ಇಲಾಖೆಗಳಿಗೂ...

BIG NEWS: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆ ಅಂಗಡಿ ತೆರೆದು ಕುಳಿತಿದೆ : ಎಲ್ಲಾ ಇಲಾಖೆಗಳಿಗೂ ಇಂತಿಷ್ಟು ಅಂತ ರೇಟ್ ಫಿಕ್ಸ್ ಮಾಡಿದ್ದಾರೆ; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಗೆ ಅಹಂ ಮದ ಸಾಕಷ್ಟು ಇದೆ. ನಮ್ಮ ಸರಕಾರಕ್ಕೆ 40% ಸರಕಾರ ಎಂದು ಆರೋಪ ಮಾಡುತ್ತಿದ್ದರು. ಈಗ ಅವರ ಸರಕಾರ 80% ಕಮಿಷನ್ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರ್ಗಾವಣೆ ದಂಧೆಯ ಅಂಗಡಿ ತೆರೆದುಕೊಂಡು ಕಾಂಗ್ರೆಸ್ ಕುಳಿತುಕೊಂಡಿದೆ. ಕಮಿಷನರ್ ಗಳು, ಡಿಸಿಗಳು, ಸಿಇಒ ಗಳಿಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಪ್ರತಿ ಇಲಾಖೆಯಲ್ಲಿಯೂ ಇಂತಿಷ್ಟು ಅಂತ ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular