ಲೋಕಸಭೆ ಚುನಾವಣೆಗೂ ಮುನ್ನವೇ `ರಾಜ್ಯ ಕಾಂಗ್ರೆಸ್ ಸರ್ಕಾರ ಪತನ’ :ನಳಿನ್ ಕುಮಾರ್ ಕಟೀಲ್ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಬರದ ನಡುವೆ ಕಾಂಗ್ರೆಸ್ ನಾಯಕರು ಕುರ್ಚಿಗಾಗಿ ಕಸರತ್ತು ನಡೆಸಿದ್ದಾರೆ. ನಾವೇನು ಸರ್ಕಾರ ಕೆಡವಲ್ಲ. ಅದು ತಾನಾಗಿಯೇ ಬೀಳಲಿದೆ. ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲ್ಲ ಎಂದರು.

ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರಕ್ಕೆ ಜಗಳ ನಡೆಯುತ್ತಿದೆ. ಸರ್ಕಾರ ಪತನವಾದ್ರೆ ಅದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ. ಬರ ಕಾಮಗಾರಿಯನ್ನು ಸಂಪೂರ್ಣ ನಿರ್ಲಕ್ಷಿಸಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ ಎಂದು ಕಿಡಿಕಾರಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read