BIG NEWS: ಬಿಜೆಪಿ ಶಾಸಕರ ವಿರುದ್ಧ FIR ಪ್ರಕರಣ; ವೋಟ್ ಬ್ಯಾಂಕ್ ಗಾಗಿ ಸರ್ಕಾರದಿಂದ ಹೀನ ರಾಜಕಾರಣ; ನಳೀನ್ ಕುಮಾರ್ ಕಟೀಲ್ ಆಕ್ರೋಶ

ಮಂಗಳೂರು: ಮಂಗಳೂರಿನ ಜರೋಸಾ ಶಾಲೆಯಲ್ಲಿ ಹಿಂದೂ ಧರ್ಮದ ಬಗ್ಗೆ ಶಿಕ್ಷಕಿಯಿಂದ ಅವಹೇಳನಕಾರಿ ಹೇಳಿಕೆ, ಪ್ರತಿಭಟನೆ ಪ್ರಕರಣ ಸಂಬಂಧ ಇಬ್ಬರು ಬಿಜೆಪಿ ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಸಂಸದ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಶಿಕ್ಷಕಿ ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಶಿಕ್ಷಕಿಯನ್ನು ಅಮಾನತುಗೊಳಿಸುವುದನ್ನು ಬಿಟ್ಟು ಶಾಸಕರ ಮೇಲೆ ಕ್ರಮ ಕೈಗೊಂಡಿದ್ದು ಸರಿಯಲ್ಲ. ಬಿಜೆಪಿಯ ಇಬ್ಬರು ಶಾಸಕ ವಿರುದ್ಧ ಕೇಸ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ನೀತಿ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಹೀನ ರಾಜಕಾರಣಕ್ಕೆ ಇಳಿದಿರುವುದು ದುರಂತ ಎಂದು ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಷಕರು ಶಿಕ್ಷಕಿ ವಿರುದ್ಧ ಹೋರಾಟ ಕೈಗೊಂಡಿದ್ದರು. ಹೋರಾಟ ಗಮನಕ್ಕೆ ಬಂದ ಮೇಲೆ ಜನಪ್ರತಿನಿಧಿಗಳ ಜವಾಬ್ದಾರಿ. ಜನರ ಸಮಸ್ಯೆ ಪರಿಹರಿಸಲು ಶಾಸಕರು ಹೋಗಿದ್ದಾರೆ. ಪೋಷಕರ ಒತ್ತಾಯವನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ. ರಾಮನನ್ನು ಅವಮಾನ ಮಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ದು:ಖ ಆಗಿದೆ. ಈ ರೀತಿ ಮಾಡುವುದು ತಪ್ಪು ಎಂದು ಹೇಳಿದ್ದಾರೆ. ಇದನ್ನು ನಾವು ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read