HomeKarnatakaBIG NEWS: ಭ್ರಷ್ಟ ಆಡಳಿತ ವಿರೋಧಿಸಿ ನಾಳೆಯಿಂದ ಎರಡು ದಿನ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ; ನಳೀನ್...

BIG NEWS: ಭ್ರಷ್ಟ ಆಡಳಿತ ವಿರೋಧಿಸಿ ನಾಳೆಯಿಂದ ಎರಡು ದಿನ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ; ನಳೀನ್ ಕುಮಾರ್ ಕಟೀಲ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ನಾಳೆ ಸೋಮವಾರ ಹಾಗೂ ಮಂಗಳವಾರ ಎರಡು ದಿನ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ಸೋಮವಾರ ಹಾಗೂ ಮಂಡಲಗಳ ಅಧ್ಯಕ್ಷರ ನೇತೃತ್ವದಲ್ಲಿ ಮಂಗಳವಾರ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳಿಗೇ ರೇಟ್ ಫಿಕ್ಸ್ ಮಾಡಿದ ಸರ್ಕಾರವಿದು. ಕಲಾವಿದರನ್ನೂ ಬಿಟ್ಟಿಲ್ಲ. ತಮ್ಮ ಬಳಿ ಲಂಚ ಕೇಳುತ್ತಿದ್ದಾರೆ ಎಂದು ಕಲಾವಿದರೇ ಆರೋಪಿಸುತ್ತಿದ್ದಾರೆ. ಹಿಂದೆ ಎಟಿಎಂ ಸರ್ಕಾರ ಬರುತ್ತೆ ಎಂದು ಹೇಳಿದ್ದಕ್ಕೆ ಸಾಕ್ಷಿ ಕೊಡಿ ಎಂದಿದ್ದರು. ಈಗ ಸಾಕ್ಷಿ, ಆಧಾರಗಳನ್ನು ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಜನರ ಮುಂದೆ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular