BIG NEWS: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಹೇಳಿಕೆ

ಮಂಗಳೂರು: ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ, ವಿಪಕ್ಷನಾಯಕನ ಆಯ್ಕೆ ನಡೆದಿರುವ ಬೆನ್ನಲ್ಲೇ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ನಲ್ಲಿ ಆಂತರಿಕ ಜಗಳ ತಾರಕ್ಕೇರಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಹಾಗೂ ಸತೀಶ್ ಜಾರಕಿಹೊಳಿ ತಂಡ ಇಬ್ಭಾಗವಾಗುತ್ತಿದೆ. ಇದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಹುದ್ದೆ ಬೇಡಿಕೆ ಇಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಸ್ತದ ಒಳಗೆ ಹಸ್ತದ ಆಪರೇಷನ್ ಆಗುತ್ತಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್ ನಿಂದ ಹೊರ ಬರಲಿದ್ದಾರೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read