HomeKarnatakaBIG NEWS: ಸಿದ್ದರಾಮಯ್ಯ ಸರ್ಕಾರದಿಂದ ತಮಿಳುನಾಡಿಗೆ ನೀರಿನ ಭಾಗ್ಯ.... ಕರ್ನಾಟಕಕ್ಕೆ ಕತ್ತಲೆ ಭಾಗ್ಯ..... ಪಂಚರಾಜ್ಯಕ್ಕೆ ಹಣದ...

BIG NEWS: ಸಿದ್ದರಾಮಯ್ಯ ಸರ್ಕಾರದಿಂದ ತಮಿಳುನಾಡಿಗೆ ನೀರಿನ ಭಾಗ್ಯ…. ಕರ್ನಾಟಕಕ್ಕೆ ಕತ್ತಲೆ ಭಾಗ್ಯ….. ಪಂಚರಾಜ್ಯಕ್ಕೆ ಹಣದ ಭಾಗ್ಯ ಸಿಕ್ಕಿದೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಕರ್ನಾಟಕಕ್ಕೆ ಕತ್ತಲೆ ಭಾಗ್ಯ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಸಿಎಂ, ಡಿಸಿಎಂ ಅಧಿಕಾರದ ಕಾದಾಟಕ್ಕೆ ರಾಜ್ಯದ ಜನತೆ ತೊಂದರೆ ಅನುಭವಿಸುವಂತಾಗಿದೆ. ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ತಮಿಳುನಾಡಿಗೆ ನೀರಿನ ಭಾಗ್ಯ, ಕರ್ನಾಟಕಕ್ಕೆ ಕತ್ತಲೆ ಭಾಗ್ಯ, ಪಂಚ ರಾಜ್ಯಕ್ಕೆ ಹಣದ ಭಾಗ್ಯ ಸಿಕ್ಕಿದೆ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸಬೇಕು ಅಂತಾ ಡಿ.ಕೆ.ಶಿವಕುಮಾರ್, ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸಬೇಕು ಅಂತಾ ಸಿದ್ದರಾಮಣ್ಣ ಯತ್ನಿಸುತ್ತಿದ್ದಾರೆ. ಇವರಿಬ್ಬರ ಕಾದಾಟಕ್ಕೆ ಕರ್ನಾಟಕ ಬಡವಾಗಿದೆ ಎಂದು ಹೇಳಿದರು.

ವರ್ಗಾವಣೆ ದಂಧೆಯಿಂದ ಆರಂಭವಾದ ಸರ್ಕಾರದ ಭ್ರಷ್ಟಾಚಾರ ಗುತ್ತಿಗೆದಾರರ ಕಮಿಷನ್ , ದಸರಾ ಹಬ್ಬದಲ್ಲಿಯೂ ಲಂಚ ಕೇಳುವವರೆಗೂ ತಲುಪಿದೆ. ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular