HomeKarnatakaಬಕ್ರೀದ್ ಹಿನ್ನೆಲೆ ಶಾಲಾ ಮಕ್ಕಳಿಂದ ಸಾಮೂಹಿಕ 'ನಮಾಜ್' ಆರೋಪ : ಹಿಂದೂ ಸಂಘಟನೆ ಕಿಡಿ

ಬಕ್ರೀದ್ ಹಿನ್ನೆಲೆ ಶಾಲಾ ಮಕ್ಕಳಿಂದ ಸಾಮೂಹಿಕ ‘ನಮಾಜ್’ ಆರೋಪ : ಹಿಂದೂ ಸಂಘಟನೆ ಕಿಡಿ

ಹಾಸನ : ದೇಶಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಇದರ ನಡುವೆ ಬಕ್ರೀದ್ ಹಿನ್ನೆಲೆ ಶಾಲಾ ಮಕ್ಕಳು ಶಾಲೆಯಲ್ಲಿ ಸಾಮೂಹಿಕ ನಮಾಜ್ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಜ್ಞಾನಸಾಗರ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮಕ್ಕಳಿಂದ ಸಾಮೂಹಿಕವಾಗಿ ನಮಾಜ್ ಮಾಡಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪ ಮಾಡಿದೆ. ಈ ಹಿನ್ನೆಲೆ ನಮಾಜ್ ಮಾಡಿಸಿದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದೆ.
ಮಕ್ಕಳನ್ನು ಒಟ್ಟಿಗೆ ಸೇರಿಸಿ ಮುಸ್ಲಿಂ ಧರ್ಮದ ಕುರಾನ್ ಪಠಣೆ  ಮಾಡಿಸಿದ್ದಾರೆ  ಎನ್ನಲಾಗುತ್ತಿದೆ. ಮಕ್ಕಳ ಸಾಮೂಹಿಕ ಪ್ರಾರ್ಥನೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular