ಮತದಾರರಿಗೆ ಗುಡ್ ನ್ಯೂಸ್: ಆ. 20ರಿಂದ ಹೆಸರು ಸೇರ್ಪಡೆ, ತಿದ್ದುಪಡಿಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್ 20 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಲಿದೆ.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಲಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ತಿದ್ದುಪಡಿ, ಹೆಸರು ನೋಂದಣಿ, ಮೃತರು ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ, 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿ ಸಲ್ಲಿಸಬಹುದಾಗಿದೆ.

ಆಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅಕ್ಟೋಬರ್ 19 ರಿಂದ 28 ರ ವರೆಗೆ ಸಮಗ್ರ ಕರಡು ಮತದಾರರ ಪಟ್ಟಿ ಸಿದ್ಧಪಡಿಸಲಾಗುವುದು. ಅಕ್ಟೋಬರ್ 29ರಂದು ಸಮಗ್ರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತಾಗಿ ಅಕ್ಟೋಬರ್ 29 ರಿಂದ ನವೆಂಬರ್ 28ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ.

ಡಿಸೆಂಬರ್ 24 ರೊಳಗೆ ಆಕ್ಷೇಪಣೆಗಳ ವಿಲೇವಾರಿ ಮುಕ್ತಾಯಗೊಳಿಸಲಾಗುವುದು. 2025ರ ಜನವರಿ 1ರೊಳಗೆ ಮತದಾರರ ಪಟ್ಟಿ ಗುಣಮಟ್ಟ ಪರಿಶೀಲಿಸಲಾಗುವುದು. ಜನವರಿ 6ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಆಕ್ಷೇಪಣೆ ಅವಧಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿಗಳು ನಿಗದಿತ ಶನಿವಾರ ಮತ್ತು ಭಾನುವಾರ ವಿಶೇಷ ಅಭಿಯಾನದ ದಿನಾಂಕಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read