HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ 254 ಹೊಸ 'ನಮ್ಮ...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ 254 ಹೊಸ ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರು: ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕ್ರಮ ಕೈಗೊಂಡಿದ್ದಾರೆ.

ಈ ಕುರಿತಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ದಿನೇಶ್ ಗುಂಡೂರಾವ್, ಹೊಸ ನಮ್ಮ ಕ್ಲಿನಿಕ್ ಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳಗಳನ್ನು ಗುರುತಿಸಿ 15 ದಿನಗಳ ಒಳಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 503 ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳನ್ನು ಮತ್ತಷ್ಟು ಸದೃಢಗೊಳಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಸ್ಥಳ ಗುರುತಿಸಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳ ತೆರೆಯಲು ಆದ್ಯತೆ ನೀಡಬೇಕು. ವಿಶೇಷವಾಗಿ ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳ ಆರಂಭಕ್ಕೆ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular