ಬೆಂಗಳೂರು : ಧಿಡೀರ್ ಆಗಿ ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡಿದರು.
ಏಕಾಏಕಿ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದು, ಶಾಲಾ ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳು, ದಿನನಿತ್ಯ ಆಫೀಸ್ ಗೆ ಹೋಗಲು ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ನಮ್ಮ ಮೆಟ್ರೋ, ಸಿಗ್ನಲ್ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸಿಗ್ನಲ್ ಸರಿ ಮಾಡುವ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಟೆಕ್ನಿಕಲ್ ಟೀಮ್ ಕೆಲಸ ಮಾಡುತ್ತಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.
TAGGED:Namma Metro