HomeKarnatakaಬೆಂಗಳೂರಿಗೆ ಮತ್ತೊಂದು ಹೆಮ್ಮೆ: ಸಿಲಿಕಾನ್ ಸಿಟಿಗೆ ಆಗಮಿಸಿದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು

ಬೆಂಗಳೂರಿಗೆ ಮತ್ತೊಂದು ಹೆಮ್ಮೆ: ಸಿಲಿಕಾನ್ ಸಿಟಿಗೆ ಆಗಮಿಸಿದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಹೆಮ್ಮೆಯ ವಿಚಾರ. ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು ಬೆಂಗಳೂರಿಗೆ ಆಗಮಿಸಿದೆ.

ಚೆನ್ನೈ ಬಂದರಿನಿಂದ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಆಗಮಿಸಿದೆ. 6 ಬೋಗಿಗಳನ್ನು ಟ್ರೇಲರ್ ಮೂಲಕ ತರಲಾಗಿದೆ. ನಮ್ಮ ಮೆಟ್ರೋದ ಚಾಲಕ ರಹಿತ ರೈಲು ಆರ್.ವಿ.ರಸ್ತೆ ಹಾಗೂ ಬೊಮ್ಮಸಂದ್ರ ಲೈನ್ ನಲ್ಲಿ ಪ್ರಾಯೋಗಿಕವಾಗಿ ಸಂಚರಿಸಲಿದೆ.

ಚೀನಾದ ಸಿಆರ್ ಆರ್ ಸಿ ನಾನ್ ಜಿಂಗ್ ಪುಜೆನ್ ಕಂ. ಲಿಮಿಟೆಡ್ ನಿಂದ ಈ ರೈಲು ತಯಾರಾಗಿದೆ. ಚೀನಾದ ಶಾಂಘೈ ಬಂದರಿನಿಂದ ಜನವರಿ 24ರಂದು ಸಮುದ್ರ ಮಾರ್ಗವಾಗಿ ಚಾಲಕ ರಹಿತ ರೈಲು ಬೋಗಿಗಳನ್ನು ಸಾಗಿಸಲಾಗಿತ್ತು. ಫೆ.6ರಂದು ಚೆನ್ನೈ ಬಂದರಿಗೆ ಬಂದು ತಲುಪಿತ್ತು. ಇದೀಗ ರಸ್ತೆ ಮಾರ್ಗದ ಮೂಲಕವಾಗಿ ಚೆನ್ನೈನಿಂದ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular