HomeLatest NewsGood News: 4 ಹೊಸ ಬಿಎಂಟಿಸಿ ಮೆಟ್ರೋ ಫೀಡರ್ ಬಸ್, ವೇಳಾಪಟ್ಟಿ

Good News: 4 ಹೊಸ ಬಿಎಂಟಿಸಿ ಮೆಟ್ರೋ ಫೀಡರ್ ಬಸ್, ವೇಳಾಪಟ್ಟಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ ನೀಡಿದೆ. ಆರ್.ವಿ.ರಸ್ತೆ-ಬೊಮ್ಮಸಂದ್ರ ನಡುವಿನ ರೈಲು ಮಾರ್ಗದಲ್ಲಿ ಸಂಚಾರ ನಡೆಸುವ ಜನರ ಅನುಕೂಲಕ್ಕಾಗಿ ಹೊಸ ಮೆಟ್ರೋ ಫೀಡರ್ ಬಸ್ ಸೇವೆಯನ್ನು ಬಿಎಂಟಿಸಿ ಜೊತೆ ಸೇರಿ ಆರಂಭಿಸಿದೆ.

ರಾಷ್ಟ್ರೀಯ ವಿದ್ಯಾಲಯ ರಸ್ತೆ-ಡೆಲ್ಮಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರವರೆಗೆ (ಹಳದಿ ಮಾರ್ಗ) ಮೆಟ್ರೋ ರೈಲು ಸಂಚಾರವನ್ನು 11/8/2025ರಿಂದ ಆರಂಭಿಸಲಾಗಿದೆ. ಈ ಮಾರ್ಗದಲ್ಲಿ ರೈಲು ಸೆಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದ ಪರಿಣಾಮವಾಗಿ ಪ್ರಯಾಣಿಕರ ಸಂಖ್ಯೆಯೂ ಅಧಿಕವಾಗಿದೆ.

ವಿಶೇಷವಾಗಿ ಆನೇಕಲ್‌ ಹಾಗೂ ಬೊಮ್ಮಸಂದ್ರ ನಮ್ಮ ಮೆಟ್ರೋ ನಿಲ್ದಾಣದ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಗರಿಷ್ಠ ಸಮಯಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಅಂತಿಮ ಹಂತದ ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪರಸ್ಪರ ಸಂಯೋಜನೆ ಮಾಡಿಕೊಂಡು ವಿಶೇಷ ಫೀಡರ್ ಬಸ್ ಸೇವೆಗಳನ್ನು ಪರಿಚಯಿಸಿವೆ.

ಈ ಯೋಜನೆಯ ಭಾಗವಾಗಿ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ, ಬಿಎಂಟಿಸಿ ವತಿಯಿಂದ 4 ವಿಶೇಷ ಮೆಟ್ರೋ ಫೀಡರ್ ಬಸ್ ಸೇವೆಗಳನ್ನು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದಿಂದ ಸಮೀಪದ ವಸತಿ ಹಾಗೂ ವಾಣಿಜ್ಯ ಪ್ರದೇಶಗಳಿಗೆ ಜನವರಿ 5 ರಿಂದ ಆರಂಭಿಸಲಾಗಿದೆ.

ಮೆಟ್ರೋ ಫೀಡರ್ ಬಸ್‌ ಸೇವೆಯ ಮಾರ್ಗ: ಆನೇಕಲ್ ಬಸ್‌ ನಿಲ್ದಾಣ – ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣ (ಚಿಕ್ಕಹಗಡೆ ಕ್ರಾಸ್, ಇಗ್ಗಲೂರು ಮತ್ತು ಚಂದಾಪುರ ಮೂಲಕ) ಆನೇಕಲ್ ಬಸ್ ನಿಲ್ದಾಣದಿಂದ ಹೊರಡುವ ಸಮಯ. 05:35, 05:55, 06:15, 06:35, 07:00, 07:20, 07:45, 08:05, 08:35, 08:55,09:10, 09:30, 09:50, 10:45, 10:55, 11:05, 12:50,14:45, 14:50, 15:10, 15:35, 15:55, 16:20, 16:40,17:20, 17:40, 18:10, 18:30, 19:05, 19:25, 19:55,20:15, 21:00, 21:20.

ಈ ಬಸ್‌ಗಳು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದಿಂದ ಹೊರಡುವ ಸಮಯ. 05:35, 05:55, 06:15, 06:35, 07:00, 07:20, 07:45, 08:05, 08:35, 08:55, 09:30, 09:50, 10:05, 10:45, 11:05, 12:05, 14:00, 15:35, 15:50, 15:55, 16:20, 16:40, 17:20, 17:40, 18:10, 18:30, 19:05, 19:25, 19:55, 20:15, 21:00, 21:20

ಈ ಫೀಡ‌ರ್‌ ಬಸ್ ಸೇವೆಗಳು ದಿನಪೂರ್ತಿ ಗರಿಷ್ಠ ಹಾಗೂ ಸಾಮಾನ್ಯ ಸಮಯಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಮೆಟ್ರೋ ಪ್ರಯಾಣಿಕರಿಗೆ ಸುಗಮ ಮತ್ತು ಸುಲಭ ಸಂಪರ್ಕವನ್ನು ಒದಗಿಸುವ ಉದ್ದೇಶ ಹೊಂದಿವೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಮೆಟ್ರೋ ಪ್ರಯಾಣಿಕರು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಕ್ಕೆ ಮತ್ತು ಅಲ್ಲಿಂದ ಪ್ರಯಾಣಿಸುವಾಗ ಈ ಫೀಡರ್ ಬಸ್ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.

ಹಳದಿ ಮಾರ್ಗದಲ್ಲಿ ಈಗಾಗಲೇ ಬಿಎಂಆರ್‌ಸಿಎಲ್ 6 ರೈಲುಗಳನ್ನು ಓಡಿಸುತ್ತಿದೆ. ಪ್ರತಿದಿನ 80,000ಕ್ಕೂ ಅಧಿಕ ಜನರು ಮೆಟ್ರೋ ಬಳಕೆ ಮಾಡುತ್ತಿದ್ದಾರೆ. ಆದ್ದರಿಂದ ಈ ಮಾರ್ಗದಲ್ಲಿ ಬಿಎಂಟಿಸಿ ಸಹ ಹೊಸ ಮೆಟ್ರೋ ಫೀಡರ್ ಬಸ್ ಓಡಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular