ಪ್ರಯಾಣಿಕರ ಗಮನಕ್ಕೆ: ಅಕ್ಟೋಬರ್ 3ರಂದು ನಮ್ಮ ಮೆಟ್ರೋ ಹಸಿರು ಮಾರ್ಗದ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ಅಕ್ಟೋಬರ್ 3ರಂದು ನಮ್ಮ ಮೆಟ್ರೋ ಹಸಿರು ಮಾರ್ಗ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ ಅಕ್ಟೋಬರ್ 3ರಂದು ಹಸಿರು ಮಾರ್ಗದ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಾಗಸಂದ್ರ ಮತ್ತು ಮಾದವಾರ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಈ ಅವಧಿಯಲ್ಲಿ ನಾಗಸಂದ್ರ ಹಾಗೂ ಪೀಣ್ಯ ಇಂಡಸ್ಟ್ರೀಯಲ್ ನಿಲ್ದಾಣಗಳವರೆಗೆ ಮೆಟ್ರೋ ಇರುವುದಿಲ್ಲ.

ನಾಗಸಂದ್ರ ಹಾಗೂ ಮಾದವಾರ ನಿಲ್ದಾಣಗಳ ನಡುವಿನ ಹೊಸ ಮಾರ್ಗವನ್ನು ಮೆಟ್ರೋ ರೈಲ್ವೆ ಸುರಕ್ಷಿತ ಆಯುಕ್ತರಿಂದ ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ ಈ ವ್ಯತ್ಯಯವುಂಟಾಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read