HomeKarnatakaNamma Metro: ಹಸಿರು ಮಾರ್ಗದ ಪ್ರಯಾಣಿಕರಿಗೆ ಮಹತ್ವದ ಅಪ್‌ಡೇಟ್

Namma Metro: ಹಸಿರು ಮಾರ್ಗದ ಪ್ರಯಾಣಿಕರಿಗೆ ಮಹತ್ವದ ಅಪ್‌ಡೇಟ್

ನಮ್ಮ ಮೆಟ್ರೋ ಹಸಿರು  ಮಾರ್ಗದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಮಹತ್ವದ ಅಪ್‌ಡೇಟ್ ಒಂದನ್ನು ನೀಡಿದೆ. ಹಸಿರು ಮಾರ್ಗದಲ್ಲಿ ತಾತ್ಕಾಲಿಕವಾಗಿ ವೇಗ ನಿಯಂತ್ರಣವನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ.

ಬಿಎಂಆರ್‌ಸಿಎಲ್ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಆರ್.ವಿ. ರಸ್ತೆ ಮತ್ತು ಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ತಾತ್ಕಾಲಿಕ ವೇಗ ನಿಯಂತ್ರಣ ಮಾಡಲಾಗುತ್ತಿದೆ ಎಂದು ಹೇಳಿದೆ.

ವೇಗ ನಿಯಂತ್ರಣ ವಿವರಗಳು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಾರ್ವಜನಿಕರಿಗೆ ತಿಳಿಸುವುದೇನೆಂದರೆ, ಹಸಿರು ಮಾರ್ಗದ ಆರ್.ವಿ. ರಸ್ತೆ ಮತ್ತು ಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಒಂದು ಭಾಗದಲ್ಲಿ ಮೆಟ್ರೋ ರೈಲು ಸಂಚಾರದ ವೇಗದ ಮೇಲೆ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರೋ ಮಾರ್ಗದ ದೀರ್ಘಕಾಲೀನ ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳುವುವ ಉದ್ದೇಶದಿಂದ ಸಪೋರ್ಟ್ ಬೇರಿಂಗ್ ಗಳನ್ನು ಬದಲಾಯಿಸುವ ನಿರ್ವಹಣಾ ಕಾಮಗಾರಿಗಳನ್ನು ನಡೆಸುವ ನಿಟ್ಟಿನಲ್ಲಿ ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ.

ನಮ್ಮ ಮೆಟ್ರೋದ ಮಾನದಂಡದ ಸುರಕ್ಷತಾ ನಿಯಮಾವಳಿಗಳ ಪ್ರಕಾರ, ಯಾವುದೇ ತಾಂತ್ರಿಕ ಅಂಶಗಳನ್ನು ಗಮನೀಯವಾಗಿ ಪರಿಶೀಲಿಸುವ ಸಂದರ್ಭಗಳಲ್ಲಿ ಕಾರ್ಯಚರಣೆಯ ಸುರಕ್ಷತಾ ದೃಷ್ಟಿಯಿಂದ ರೈಲುಗಳ ವೇಗವನ್ನು ತಾತ್ಕಾಲಿಕವಾಗಿ ನಿಯಂತ್ರಿಸಲಾಗುತ್ತದೆ.

ಹಸಿರು ಮಾರ್ಗದ ರೈಲು ಸೇವೆಗಳು ವೇಳಾಪಟ್ಟಿಯಂತೆ ಮುಂದುವರಿಯುತ್ತಿದ್ದು, ಅರ್.ವಿ ರಸ್ತೆ ಮತ್ತು ಜಯನಗರ ನಿಲ್ದಾಣಗಳ ನಡುವೆ ಪಯಾಣಿಸುವ ಪ್ರಯಾಣಿಕರಿಗೆ ಸ್ವಲ್ಪ ಹೆಚ್ಚುವರಿ ಪ್ರಯಾಣ ಸಮಯ ಅನುಭವವಾಗುವ ಸಾಧ್ಯತೆ ಇದೆ.

ಪ್ರಯಾಣಿಕರ ಸುರಕ್ಷತೆಯೇ ಅತ್ಯುನ್ನತ ಆದ್ಯತೆಯಾಗಿದ್ದು, ಇಂತಹ ಕ್ರಮಗಳನ್ನು ಮೆಟ್ರೋ ರೈಲು ಸುರಕ್ಷತಾ ನಿಯಮಾವಳಿಗಳ ಅನುಸಾರವಾಗಿ ಕೈಗೊಳ್ಳಲಾಗುತ್ತದೆ ಎಂಬುದನ್ನು ಬಿ.ಎಂ.ಅರ್.ಸಿ.ಎಲ್ ಖಚಿತಪಡಿಸುತ್ತದೆ ಎಂದು ಹೇಳಿದೆ.

ತಾಂತ್ರಿಕ ತಂಡಗಳು ಸಂಬಂಧಿತ ಈ ಭಾಗವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಅಗತ್ಯ ಪರಿಶೀಲನೆಗಳು ಮತ್ತು ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುತ್ತಿವೆ. ಸುರಕ್ಷತೆ ಮತ್ತು ಕಾರ್ಯಾಚರಣಾ ವಿಶ್ವಾಸಾರ್ಹತೆಯ ಅತ್ಯುನ್ನತ ಮಾನದಂಡಗಳನ್ನು ಕಾಯ್ದುಕೊಂಡು ಈ ನಿರ್ವಹಣಾ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular