HomeLatest NewsBREAKING: ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಹಸಿರು ಮಾರ್ಗದ ಮೆಟ್ರೋ ಸ್ಟೇಷನ್

BREAKING: ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಹಸಿರು ಮಾರ್ಗದ ಮೆಟ್ರೋ ಸ್ಟೇಷನ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದರಿಂದಾಗಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಹಸಿರು ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಧಗ ಧಗನೆ ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೆಟ್ರೋ ನಿಲ್ದಾಣದ ತುಂಬೆಲ್ಲ ದಟ್ಟ ಹೊಗೆ ಆವರಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಹಾಗೂ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಈ ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಮೆಟ್ರೋ ರೈಲು ಸಂಚಾರ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular