ಬೆಂಗಳೂರು: ಇದೇ ಮೊದಲ ಬಾರಿಗೆ ವೈದ್ಯರು ನಮ್ಮ ಮೆಟ್ರೋದಲ್ಲಿ ಅಂಗಾಂಗ ಸಾಗಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆಗೆ ನೆರವಾಗಿದ್ದಾರೆ.
ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಅಂಗಾಂಗ ಸಾಗಾಟ ಮಾಡಲಾಗಿದೆ. ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಪಾರಾಗಲು ತುರ್ತು ಕಸಿಗಾಗಿ ಯಕೃತ್ ನ್ನು ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣದಿಂದ ಆರ್.ಆರ್.ನಗರ ಮೆಟ್ರೋ ನಿಲ್ದಾಣಕ್ಕೆ ನಮ್ಮ ಮೆಟ್ರೋದಲ್ಲಿ ಸಾಗಿಸಲಾಗಿದೆ.
ಆರ್. ಆರ್.ನಗರ ಮೆಟ್ರೋ ನಿಲ್ದಾಣಕ್ಕೆ ಅಂಗಾಂಗ ಆಗಮಿಸುತ್ತಿದಂತೆ ಆಂಬುಲೆನ್ಸ್ ಮೂಲಕ ಸ್ಪರ್ಶ್ ಆಸ್ಪತ್ರೆಗೆ ಕೊಂಡೊಯ್ದು ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ ರೆಂದು ತಿಳಿದುಬಂದಿದೆ.