HomeLatest NewsBIG NEWS : 'ನಮ್ಮ ಮೆಟ್ರೋ' ಪ್ರಯಾಣಿಕರೇ ಗಮನಿಸಿ : ಇಂದು 'ನೇರಳೆ ಮಾರ್ಗ'ದಲ್ಲಿ...

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ಇಂದು ‘ನೇರಳೆ ಮಾರ್ಗ’ದಲ್ಲಿ ಸಂಚಾರ ವ್ಯತ್ಯಯ |Namma Metro

ಬೆಂಗಳೂರು : ನಿಗದಿತ ನಿರ್ವಹಣಾ ಕಾಮಗಾರಿಗಾಗಿ, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಇಂದು ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ.

ಜುಲೈ 06, 2025 ರಂದು ಭಾನುವಾರ ಬೆಳಿಗ್ಗೆ 7:00 ರಿಂದ 8:00ರ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಈ ಕಾಮಗಾರಿಗಳನ್ನು ನಿರ್ವಹಿಸಲು, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಈ ಮಾರ್ಗದಲ್ಲಿ ಬೆಳಿಗ್ಗೆ 08:00 ರಿಂದ ಸಾಮಾನ್ಯ ಸೇವೆಗಳನ್ನು ಪುನರಾರಂಭಿಸುತ್ತದೆ.

ಇತರ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ), ಮತ್ತು ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಿಗ್ಗೆ 07:00 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ.
ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಯನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸುವಂತೆ ವಿನಂತಿಸಲಾಗಿದೆ. ಇದರಿಂದ ಉಂಟಾಗುವ ಅನಾನುಕೂಲತೆಗೆ ಬಿಎಂಆರ್ಸಿಎಲ್ ವಿಷಾದಿಸುತ್ತದೆ ಮತ್ತು ಸಾರ್ವಜನಿಕ ಸಹಕಾರವನ್ನು ಕೋರುತ್ತದೆ ಎಂದು ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular