HomeLive NewsBIG NEWS: ಆರ್ ಸಿಬಿ ವಿಜಯೋತ್ಸವ: ಒಂದೇ ದಿನ 9 ಲಕ್ಷಕ್ಕೂ ಹೆಚ್ಚು ಜನರಿಂದ ಮೆಟ್ರೋ...

BIG NEWS: ಆರ್ ಸಿಬಿ ವಿಜಯೋತ್ಸವ: ಒಂದೇ ದಿನ 9 ಲಕ್ಷಕ್ಕೂ ಹೆಚ್ಚು ಜನರಿಂದ ಮೆಟ್ರೋ ಪ್ರಯಾಣ

ಬೆಂಗಳೂರು: 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ವಿಜಯೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈನಡುವೆ ನಿನ್ನೆ ಒಂದೇ ದಿನದಲ್ಲಿ 9 ಲಕ್ಷಕ್ಕೂ ಅಧಿಕ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, ದಾಖಲೆ ಬರೆದಿದೆ.

ಬೆಂಗಳುರು ಮೆಟ್ರೋ ನಿಗಮದ ಪ್ರಕಾರ ನಿನ್ನೆ ಎಂದಿಗಿಂತ ಪ್ರಯಾಣಿಕರ ಸಂಖ್ಯೆ ಮೂರುಪಟ್ಟು ಹೆಚ್ಚಾಗಿದೆ. ಬರೋಬ್ಬರಿ 9,66,732 ಜನರು ಮೆಟ್ರೋದಲ್ಲಿ ಪ್ರಯಾನಿಸಿದ್ದಾರೆ.

ನೇರಳೆ ಮಾರ್ಗದಲ್ಲಿ 4,78,334 ಜನರು ಪ್ರಯಾಣ ಮಾಡಿದ್ದಾರೆ. ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್- ಹಸಿರು ಮಾರ್ಗದಲ್ಲಿ 2,84,674 ಜನರು ಪ್ರಯಾಣಿಸಿದ್ದಾರೆ. ಮೆಜೆಸ್ಟಿಕ್ ನಿಲ್ದಾಣದಿಂದಲೇ 2,03,724 ಜನರು ಪ್ರಯಾಣ ಮಾಡಿದ್ದಾರೆ ಒಟ್ಟಾರೆ ನಿನ್ನೆ ಒಂದೇ ದಿನದಲ್ಲಿ 9,66,732 ಜನರು ಮ್ರೆಟ್ರೋದಲ್ಲಿ ಪ್ರಯಾಣಿಸಿ ದಾಖಲೆ ನಿರ್ಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ 8.7 ಲಕ್ಷ ಜನರು ಮೆಟ್ರೋದಲ್ಲಿ ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ದಾಖಲೆ ಬರೆದಿತ್ತು. ಈಗ ಆ ದಾಖಲೆಯನ್ನು ಹಿಂದಿಕ್ಕಿದೆ.

For Latest News Updates, Join Our Whatsapp Community🚩
RELATED ARTICLES

Most Popular