ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ. ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಲೈನ್ ಗೆ ಚಾಲನೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವ ಮನೋಹರ್ ಲಾಲ್ ಮಾಹಿತಿ ನೀಡಿದ್ದಾರೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಯೆಲ್ಲೋ ಲೈನ್ ಮೆಟ್ರೋ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಆರ್.ವಿ.ರೋಡ್ ನಿಂದ ಬೊಮ್ಮಸಂದ್ರ ವರೆಗಿನ ನಮ್ಮ ಮೆಟ್ರೋ ಯೆಲ್ಲೋ ಲೈನ್ ರೈಲು ಸಂಚರಿಸಲಿದೆ. ಈಗಾಗಲೇ ಸುರಕ್ಷತಾ ಪರೀಕ್ಷೆ ನಡೆಸಿದ್ದ ರೈಲ್ವೆ ಸುರಕ್ಷತಾ ಆಯುಕ್ತರು ಚಾಲಕರಹಿತ ರೈಲುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.