ಬೆಂಗಳೂರು: ನಮ್ಮ ಮೆಟ್ರೋ ಸಂಚಾರದ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.
ಯೆಲ್ಲೋ ಲೈನ್ ಮೆಟ್ರೋ ಇತ್ತೀಚೆಗಷ್ಟೇ ಆರಂಭವಾಗಿತ್ತು. ಆದರೆ ಈಗ ತಾಂತ್ರಿಕ ಸಮಸ್ಯೆಯಿಂದಾಗೊ ಹಳದಿ ಮಾರ್ಗ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಪ್ರತಿ ೨೫ ನಿಮಿಷಕ್ಕೆ ಒಂದರಂತೆ ರೈಲುಗಳು ಸಂಚಾರ ನಡೆಸುತ್ತಿವೆ. ವಿಳಮ್ಬವಾಗುತ್ತಿರುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಬಿಎಂಆರ್ ಸಿ ಎಲ್ ತಿಳಿಸಿಇದೆ.
ಆರ್.ವಿ ಕಾಲೇಜು ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ ಉದ್ದದ ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಇದೀಗ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ಕೊಂಚ ವಿಳಂಬವಾಗಿ ಸಂಚಾರ ನಡೆಸುತ್ತಿದ್ದು, ಅನಾನುಕೂಲತೆಗೆ ಸಾರ್ವಜನಿಕರು ಸಹಕರಿಸುವಂತೆ ಬಿಎಂಆರ್ ಸಿಎಲ್ ಮನವಿ ಮಾಡಿದೆ.