HomeLatest Newsಬೆಂಗಳೂರಿಗರಿಗೆ ಗುಡ್ ನ್ಯೂಸ್: ಪಿಂಕ್ ಲೈನ್ ಮೆಟ್ರೋಗೆ ನಾಲ್ಕನೇ ರೈಲು ಆಗಮನ: ಮೇನಲ್ಲಿ ಸಂಚಾರಕ್ಕೆ ಸಿದ್ಧ

ಬೆಂಗಳೂರಿಗರಿಗೆ ಗುಡ್ ನ್ಯೂಸ್: ಪಿಂಕ್ ಲೈನ್ ಮೆಟ್ರೋಗೆ ನಾಲ್ಕನೇ ರೈಲು ಆಗಮನ: ಮೇನಲ್ಲಿ ಸಂಚಾರಕ್ಕೆ ಸಿದ್ಧ

ಬೆಂಗಳೂರು: ಬೆಂಗಳೂರಿಗರಿಗೆ ಗುಡ್ ನ್ಯೂಸ್. ನಮ್ಮ ಮೆಟ್ರೋ ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.

ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಆಗಮಿಸಿದ್ದು, ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಈ ರೈಲನ್ನು ಪ್ರಸ್ತುತ ಕೊತ್ತನೂರು ಡಿಪೋದಲ್ಲಿನ ಇನ್ಸ್‌ಪೆಕ್ಷನ್ ಬೇ ಲೈನ್ ಗೆ ಸ್ಥಳಾಂತರಿಸಿ ಅಗತ್ಯ ತಾಂತ್ರಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಎಲ್ಲಾ ಪರೀಕ್ಷೆಗಳು ಮತ್ತು ನಿಯಮಾನುಸಾರ ಅನುಮತಿ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ರೈಲು ಸೇವೆಗೆ ಸಿದ್ಧವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಂಕ್ ಲೈನ್‌ನ ಮೊದಲ ರೈಲನ್ನು ಬಿಇಎಂಎಲ್ ಸಂಸ್ಥೆ 2025ರ ಡಿಸೆಂಬರ್‌ 11ರಂದು ಬಿಡುಗಡೆ ಮಾಡಿತ್ತು. ಬಳಿಕ ಫೆಬ್ರವರಿಯಲ್ಲಿ ಇನ್ನೂ ಎರಡು ರೈಲುಗಳನ್ನು ಬಿಎಂಆರ್‌ಸಿಎಲ್‌ಗೆ ಹಸ್ತಾಂತರಿಸಿತ್ತು. ಈಗ ನಾಲ್ಕನೇ ರೈಲು ಕೂಡ ಬಂದಿರುವುದರಿಂದ ಪಿಂಕ್ ಲೈನ್ ಸೇವೆ ಆರಂಭದ ಸಿದ್ಧತೆಗಳು ವೇಗ ಪಡೆದುಕೊಂಡಿವೆ.

ಸುಮಾರು 7.5 ಕಿಲೋಮೀಟರ್ ಉದ್ದದ ಕಾಳೇನ ಅಗ್ರಹಾರ – ತಾವರೆಕೆರೆಯ ಪಿಂಕ್ ಲೈನ್ ಮಾರ್ಗದಲ್ಲಿ ಮೇ ತಿಂಗಳಲ್ಲಿ ರೈಲು ಸಂಚಾರ ಆರಂಭಿಸಲು ಬಿಎಂಆರ್‌ಸಿಎಲ್ ಉದ್ದೇಶಿಸಿದೆ.

ಇನ್ನು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿನ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಕೋಲ್ಕತ್ತಾ ಮೂಲದ ಟಿಟಾಗಢ್ ರೈಲ್ ಸಿಸ್ಟಮ್ಸ್ ಲಿಮಿಟೆಡ್ ಸಂಸ್ಥೆ ಪರ್ಪಲ್ ಹಾಗೂ ಗ್ರೀನ್ ಲೈನ್‌ಗಳಿಗಾಗಿ ಎರಡನೇ ಡಿಟಿಜಿ ರೈಲು ಸೆಟ್‌ ಅನ್ನು ಕಳುಹಿಸಿದೆ. ಈ ರೈಲು ಈ ತಿಂಗಳ ಅಂತ್ಯದೊಳಗೆ ಪೀಣ್ಯಾ ಡಿಪೋ ತಲುಪುವ ಸಾಧ್ಯತೆ ಇದೆ.

ಈ ಎರಡು ಹೊಸ ರೈಲುಗಳು ಮೇ–ಜೂನ್ ವೇಳೆಗೆ ಪರ್ಪಲ್ ಮತ್ತು ಗ್ರೀನ್ ಲೈನ್‌ಗಳಲ್ಲಿ ಸಂಚಾರ ಆರಂಭಿಸಲಿದೆ. ಇದರಿಂದ ಪೀಕ್ ಅವಧಿಯಲ್ಲಿ ಮೆಟ್ರೋದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular