HomeLatest Newsಪ್ರಯಾಣಿಕರ ಗಮನಕ್ಕೆ: ಆ 9ರಂದು ನಾಳೆ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ

ಪ್ರಯಾಣಿಕರ ಗಮನಕ್ಕೆ: ಆ 9ರಂದು ನಾಳೆ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ

ಬೆಂಗಳೂರು: ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಆಗಸ್ಟ್ 9ರಂದು ನಾಳೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ) ತಿಳಿಸಿದೆ.

ಅಗತ್ಯ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ ಟ್ರಿನಿಟಿ, ಎಂ.ಜಿ.ರಸ್ತೆ ಸೇರಿದಂತೆ 6 ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರೋ ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಯನ್ನು ಬಿ.ಎಂ.ಆರ್.ಸಿ.ಎಲ್ ಆಗಸ್ಟ್​​ 9ರಂದು ಅಂದರೆ ಭಾನುವಾರ ಕೈಗೊಳ್ಳಲಿದೆ. ಈ ಕಾಮಗಾರಿಯನ್ನು ಕೈಗೊಳ್ಳಲು ಅನುಕೂಲವಾಗುವಂತೆ, ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸೇವೆಯನ್ನು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಅಂದರೆ ಎರಡು ಗಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.

ಈ ಅವಧಿಯಲ್ಲಿ ಕೆಳಕಂಡ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳು ನಿಯಮಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ.

ಚಲ್ಲಘಟ್ಟದಿಂದ ಎಂ.ಜಿ. ರಸ್ತೆ
ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ)
ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್​
ಆ‌ರ್.ವಿ. ರಸ್ತೆಯಿಂದ ಬೊಮ್ಮಸಂದ್ರ

ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವಿನ ಮಾರ್ಗವನ್ನು ಒಳಗೊಂಡಂತೆ ಸಂಪೂರ್ಣ ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಪುನರಾರಂಭಗೊಳ್ಳಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ಸ್ಥಗಿತವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ಬಿಎಂಆರ್​ಸಿಎಲ್​ ಕೋರಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular