HomeKarnatakaಪ್ರಯಾಣಿಕರ ಗಮನಕ್ಕೆ: ಮೇ 10ರಂದು ಭಾನುವಾರ ನಮ್ಮ ಮೆಟ್ರೋ ಈ ಮಾರ್ಗದಲ್ಲಿ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ: ಮೇ 10ರಂದು ಭಾನುವಾರ ನಮ್ಮ ಮೆಟ್ರೋ ಈ ಮಾರ್ಗದಲ್ಲಿ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ಸಂಚಾರದಲ್ಲಿ ಮೇ 10ರಂದು ಭಾನುವಾರ ಕೆಲ ಮಾರ್ಗಗಳಲ್ಲಿ ಸಂಚಾರ ಬದಲಾವಣೆಯಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ-ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.

ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ 10ರಂದು ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳುವಂತೆ ಬಿಎಂಆರ್​​ಸಿಎಲ್​​ ವಿನಂತಿಸಿಕೊಂಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜ್ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಾಗಿ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಅಲ ಸ್ಥಗಿತಗೊಳ್ಳಲಿದೆ. ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9 ಗಂಟೆ ವರೆಗೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರವಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಅವಧಿಯಲ್ಲಿ ಮೆಟ್ರೋ ರೈಲು ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 7 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಿ, ಕೆಳಕಂಡ ಮಾರ್ಗಗಳಲ್ಲಿ ಎಂದಿನ ಸಂಚರಿಸಲಿವೆ.

ಚಲ್ಲಘಟ್ಟ – ವಿಜಯನಗರ
ಎಂ.ಜಿ. ರಸ್ತೆ – ವೈಟ್‌ಫೀಲ್ಡ್ (ಕಾಡುಗೋಡಿ)
ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್
ಆರ್.ವಿ. ರಸ್ತೆ – ಬೊಮ್ಮಸಂದ್ರ

ಬೆಳಿಗ್ಗೆ 9 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ – ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular