HomeKarnatakaBIG NEWS: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ; ಎಸ್ಕೇಪ್ ಆಗುತ್ತಿದ್ದ ಆರೋಪಿ ಅರೆಸ್ಟ್

BIG NEWS: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ; ಎಸ್ಕೇಪ್ ಆಗುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರರಣ ಬೆಳಕಿಗೆ ಬಂದಿದೆ. ಎಸ್ಕೇಪ್ ಆಗಲು ಯತ್ನಿಸುತ್ತಿದ್ದ ಆರೋಪಿಯನ್ನು ಮೆಟ್ರೋ ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ.

ಲೋಕೇಶ್ ಬಂಧಿತ ಆರೋಪಿ. ರಾಜಾಜಿನಗರದ ಮೆಟ್ರೋ ಸ್ಟೇಷನ್ ನಲ್ಲಿ 22 ವರ್ಷದ ಯುವತಿಯೊಂದಿಗೆ ಆರೋಪಿ ಲೋಕೇಶ್ ಅನುಚಿತವಾಗಿ ವರ್ತಿಸುತ್ತಿದ್ದ. ಅಲ್ಲದೇ ಯುವತಿಯ ಮೈ ಕೈಮುಟ್ಟಿ ಕಿರುಕುಳ ನೀಡುತ್ತಿದ್ದ. ಯುವತಿ ಜೋರಾಗಿ ಕೂಗಿಕೊಳ್ಳುತ್ತಿದ್ದಂತೆ ಆರೋಪಿ ಮುಂದಿನ ನಿಲ್ದಾಣದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿ ಕಿರುಚುತ್ತಿದ್ದಂತೆ ಅಲರ್ಟ್ ಆದ ಮೆಟ್ರೋ ಭದ್ರತಾ ಸಿಬ್ಬಂದಿಗಳು ಆರೋಪಿಯನ್ನು ಹಿಡಿದಿದ್ದಾರೆ. ಬಳಿಕ ಉಪ್ಪಾರಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯ ವಿಚಾರಣೆ ವೇಳೆ ಆತ ಯುವತಿಯರಿಗೆ ಲೈಂಗಿಕ ಕಿರುಕುಳ ಮಾತ್ರವಲ್ಲ, ಯುವತಿಯರ ಮೊಬೈಲ್ ಕಳ್ಳತನ ಪ್ರಕರಣದಲ್ಲಿಯೂ ಈ ಹಿಂದೆ ಸಿಕ್ಕಿ ಬಿದ್ದಿದ್ದ ಎಂದು ತಿಳಿದುಬಂದಿದೆ. ಈ ಹಿಂದೆ ಬಿಎಂಟಿಸಿ ಬಸ್ ಗಳಲ್ಲಿ ಯುವತಿಯರ ಮೊಬೈಲ್ ಕಳ್ಳತನ ಮಾಡಿ ಬಂಧಿತನಾಗಿದ್ದ ಆರೋಪಿ ಲೋಕೇಶ್ ನಿಂದ 20 ಮೊಬೈಲ್ ವಶಕ್ಕೆ ಪಡೆಯಲಾಗಿತ್ತು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular