BIG NEWS: ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮುಂದುವರಿದ ಮರಣ ಮೃದಂಗ; ಮತ್ತೆ 7 ಜನರು ಸಾವು; ಮೃತರ ಸಂಖ್ಯೆ 31ಕ್ಕೆ ಏರಿಕೆ

ನಂದೇಡ್: ಮಹಾರಾಷ್ಟ್ರದ ನಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಸಾವಿನ ಸರಣಿ ಮುಂದುವರೆದಿದೆ. ಮತ್ತೆ 7 ಜನರು ಸಾವನ್ನಪ್ಪಿದ್ದು, ಕಳೆದ 48 ಗಂಟೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ನಾಂದೇಡ್ ನ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ಕಳೆದ ರಾತ್ರಿ ನಾಲ್ಕು ಮಕ್ಕಳು ಸೇರಿ 7 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಆಸ್ಪತ್ರೆಯಲ್ಲಿ ಒಟ್ಟು 31 ಜನರು ಮೃತಪಟ್ಟಿದ್ದಾರೆ.

ಕಳೆದ 48 ಗಂಟೆಗಳಲ್ಲಿ ಸಾವನ್ನಪ್ಪಿದವರಲ್ಲಿ ಒಟ್ಟು 16 ನವಜಾತ ಶಿಶುಗಳಿದ್ದು, ಉಳಿದವರು ಮಹಿಳೆ ಹಾಗೂ ಪುರುಷರಾಗಿದ್ದಾರೆ. ಔಷಧಿಗಳ ಕೊರತೆ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿಂದ ಈ ದುರಂತ ಸಂಭವಿಸಿದೆ ಎಂದು ಆಸ್ಪತ್ರೆಯವರು ಹೇಳುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ತಜ್ಞರ ಸಮಿತಿ ರಚನೆ ಮಾಡಿ ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ಬಳಿಕ ನವಜಾತ ಶಿಶುಗಳ ಹಾಗೂ ರೋಗಿಗಳ ಸರಣಿ ಸಾವಿಗೆ ಕಾರಣವೇನು ಎಂಬುದು ಬಯಲಾಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read