HomeLatest NewsBIG NEWS: ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

BIG NEWS: ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಜೂನ್‌ 30 ರ ಬೆಳಗ್ಗೆ 6 ಗಂಟೆಯಿಂದ ಜುಲೈ 3 ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಜೂನ್‌ 30 ರಿಂದ ಜುಲೈ 3 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳನ್ನು ಮುಂಗಡ ಕಾಯ್ದಿರಿಸುವಿಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂದಿಬೆಟ್ಟದಲ್ಲಿ ಜುಲೈ 2ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular