HomeKarnatakaಮಾ. 25 ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಮಾ. 25 ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಮಾರ್ಚ್ 25 ರಂದು ಮುದ್ದೇನಹಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ನಾಳೆ ಬೆಳಗ್ಗೆ 10 ಗಂಟೆಯಿಂದ ಮಾರ್ಚ್ 25 ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂದಿ ಗಿರಿಧಾಮದ ಅತಿಥಿ ಗೃಹದಲ್ಲಿ ಅಧಿಕಾರಿಗಳು ತಂಗಿದ್ದಾರೆ. ಪೊಲೀಸರು, ಎಸ್.ಪಿ.ಜಿ., ಪ್ರಧಾನಮಂತ್ರಿ ಭದ್ರತಾ ಸಿಬ್ಬಂದಿ ವಾಸ್ತವ್ಯ ಹೂಡಿದ್ದಾರೆ. ಅಧಿಕಾರಿಗಳ ತುರ್ತು ಸಂಚಾರಕ್ಕೆ ಅನುಕೂಲ ಕಲ್ಪಿಸಲು ಸಾರ್ವಜನಿಕರಿಗೆ ನಂದಿ ಗಿರಿಧಾಮಕ್ಕೆ ನಿರ್ಬಂಧ ಹೇರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular