HomeLatest NewsBIG NEWS: ನಂದಿಬೆಟ್ಟಕ್ಕೆ ಇಂದಿನಿಂದ ಪ್ರವಾಸಿಗರಿಗೆ ನಿರ್ಬಂಧ

BIG NEWS: ನಂದಿಬೆಟ್ಟಕ್ಕೆ ಇಂದಿನಿಂದ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಇಂದಿನಿಂದ ನಂದಿಬೆಟ್ಟಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಮೂರು ದಿನಗಳಕಾಲ ಪ್ರವಾಸಿಗರಿಗೆ ನಂದಿಗಿರಿಧಾಮಕ್ಕೆ ಪ್ರವೇಶ ಇಲ್ಲ.

ಜೂನ್ 19ರಂದು ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ನಂದಿಬೆಟ್ಟಕ್ಕೆ ನಿರ್ಧಂಧಿಸಲಾಗಿದೆ.

ಇಂದು ಸಂಜೆ ೫ಗಂಟೆಯಿಂದ ಜೂ. 20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರು, ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ನಿಷೇಧ ಹೇರಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಷ್ಟೇ ಅಲ್ಲ ನಂದಿ ಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್ ಗೂ ನಿಷೇಧಿಸಲಾಗಿದೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular