HomeLatest Newsಪ್ರೇಮಿಗಳ ದಿನದಂದು ನಂದಿಗಿರಿಧಾಮ ಬಂದ್: ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವಿರುದ್ಧ ಪ್ರೇಮಿಗಳ ಆಕ್ರೋಶ

ಪ್ರೇಮಿಗಳ ದಿನದಂದು ನಂದಿಗಿರಿಧಾಮ ಬಂದ್: ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವಿರುದ್ಧ ಪ್ರೇಮಿಗಳ ಆಕ್ರೋಶ

ಚಿಕ್ಕಬಳ್ಳಾಪುರ: ಫೆಬ್ರವರಿ 14, ಪ್ರೇಮಿಗಳ ದಿನದಂದು ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದು, ಜಿಲ್ಲಾಡಳಿತದ ವಿರುದ್ಧ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಮೊದಲ ಬಾರಿಗೆ ಪ್ರೇಮಿಗಳ ದಿನದಂದು ನಂದಿಗಿರಿಧಾಮಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಕೆಲ ಭಗ್ನ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ನೀಡಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾಡಳಿತದ ಕ್ರಮಕ್ಕೆ ಪ್ರೇಮಿಗಳು ಕಿಡಿಕಾರಿದ್ದಾರೆ. ಸಾಯೋರು ಎಲ್ಲಿದ್ರೂ ಸಾಯ್ತಾರೆ, ನಮಗ್ಯಾಕೆ ನಿರ್ಬಂಧ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂದಿಗಿರಿಧಾಮಕ್ಕೆ ಭದ್ರತೆ ಕಲ್ಪಿಸಬೇಕಾಗುತ್ತದೆ ಎಂಬ ಕಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಫೆಬ್ರವರಿ 14, ಪ್ರೇಮಿಗಳ ದಿನದಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವೇಶ ಇರುವುದಿಲ್ಲ. ಈ ಸಮಯದಲ್ಲಿ ಯಾವುದೇ ಪ್ರವಾಸಿಗರು ಹಾಗೂ ಖಾಸಗಿ ವಾಹನಗಳು ನಂದಿಬೆಟ್ಟಕ್ಕೆ ಹೋಗಲು ಅವಕಶವಿರುವುದಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular