HomeLatest NewsBIG NEWS: ನಿರ್ಬಂಧವಿದ್ದರೂ ನಂದಿಗಿರಿಧಾಮಕ್ಕೆ ಬಂದ ಪ್ರೇಮಿಗಳು: ಪ್ರವೇಶವಿಲ್ಲದೇ ನಿರಾಸೆಯಿಂದ ವಾಪಸ್

BIG NEWS: ನಿರ್ಬಂಧವಿದ್ದರೂ ನಂದಿಗಿರಿಧಾಮಕ್ಕೆ ಬಂದ ಪ್ರೇಮಿಗಳು: ಪ್ರವೇಶವಿಲ್ಲದೇ ನಿರಾಸೆಯಿಂದ ವಾಪಸ್

ಬೆಂಗಳೂರು: ಪ್ರೇಮಿಗಳ ದಿನಾಚಾರಣೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ವಿಶ್ವ ವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ಜಿಲ್ಲಾಡಳಿತ ಪ್ರವಾಗಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವೇಶ ಬಂದ್ ಮಾಡಲಾಗಿದೆ.

ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದ್ದರೂ ಮುಂಜಾನೆಯಿಂದಲೇ ಪ್ರೇಮಿಗಳು ನಂದಿಬೆಟ್ಟದ ಪ್ರವೇಶ ದ್ವಾರದ ವರೆಗೂ ಬಂದಿದ್ದಾದೆ. ನಂದಿಬೆಟ್ಟಕ್ಕೆ ಪ್ರವೇಶ ನಿರಾಕರಿಸುತ್ತಿದ್ದಂತೆ ಪ್ರೇಮಿಗಳು ನಿರಾಸೆಯಿಂದ ವಾಪಸ್ ಆಗುತ್ತಿರುವ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭುಜಿ ಅವರು ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಪ್ರೇಮಿಗಳ ದಿನದಂದು ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ವಿಶೇಷವಾಗಿ ಪ್ರೇಮಿಗಳು ಮತ್ತು ಭಗ್ನ ಪ್ರೇಮಿಗಳು ನಂದಿಗಿರಿಧಾಮಕ್ಕೆ ಬರುವ ಸಾಧ್ಯತೆ ಇದೆ. ಭಗ್ನ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸುವಂತಹ ಆತಂಕವಿದ್ದು, ಅಂತಹ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ನಂದಿಬೆಟ್ಟಕ್ಕೆ ಇಂದು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಈ ಬಗ್ಗೆ ಕೆಲ ದಿನಗಳಿಂದಲೇ ಜಿಲ್ಲಾಡಳಿತ ಆದೇಶ ಹೊರಡಿಸಿದ್ದರೂ ಪ್ರೇಮಿಗಳು ಇಂದು ಬೆಳ್ಳಂ ಬೆಳಿಗ್ಗೆಯೇ ನಂದಿಬೆಟ್ಟದತ್ತ ಸಾಗಿದ್ದಾರೆ. ಆದರೆ ಪ್ರವೇಶದ್ವಾರದ ಬಳಿ ಅವರನ್ನು ತಡೆಯಲಾಗಿದ್ದು, ನಿರಾಸೆಯಿಂದ ವಾಪಸ್ ಆಗುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular